Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:19 - ಕನ್ನಡ ಸತ್ಯವೇದವು C.L. Bible (BSI)

19 ಲಾಬಾನನು, “ಆಕೆಯನ್ನು ಬೇರೆ ಒಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಲೇಸು, ನನ್ನಲ್ಲೇ ತಂಗಿರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಲಾಬಾನನು, “ಆಕೆಯನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಒಳ್ಳೆಯದು. ಆದುದರಿಂದ ನೀನು ನನ್ನ ಸಂಗಡ ವಾಸವಾಗಿರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಲಾಬಾನನು - ಆಕೆಯನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದೇ ಉಚಿತ; ನನ್ನ ಬಳಿಯಲ್ಲಿರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಲಾಬಾನನು, “ಬೇರೊಬ್ಬನು ಆಕೆಯನ್ನು ಮದುವೆಯಾಗುವುದಕ್ಕಿಂತ ನೀನು ಮದುವೆಯಾಗುವುದೇ ಆಕೆಗೆ ಒಳ್ಳೆಯದು. ಆದ್ದರಿಂದ ನನ್ನೊಂದಿಗಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಲಾಬಾನನು, “ಅವಳನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ, ನಿನಗೆ ಕೊಡುವುದು ಒಳ್ಳೆಯದು. ಆದ್ದರಿಂದ ನನ್ನ ಸಂಗಡವಿರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:19
6 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ಯಕೋಬನಿಗೆ ರಾಖೇಲಳ ಮೇಲೆ ಪ್ರೀತಿ. ಎಂತಲೇ, “ನಿಮ್ಮ ಕಿರಿಯ ಮಗಳು ರಾಖೇಲಳಿಗೋಸ್ಕರ ನಿಮ್ಮಲ್ಲಿ ಏಳು ವರುಷ ಸೇವೆಮಾಡುತ್ತೇನೆ,” ಎಂದು ಹೇಳಿದನು.


ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ‌ವರ್ಷ‌ಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.


ಸಂಸಾರಿಗಳಾಗಿ ಗಂಡು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿ. ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿ. ಅವರೂ ಗಂಡುಹೆಣ್ಣು ಮಕ್ಕಳನ್ನು ಪಡೆಯಲಿ. ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು