Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:2 - ಕನ್ನಡ ಸತ್ಯವೇದವು C.L. Bible (BSI)

2 ಕೂಡಲೆ ಅವನಿಗೆ ಆ ಅಡವಿಯಲ್ಲಿ ಬಾವಿಯೊಂದು ಕಾಣಿಸಿತು. ಅದರ ಬಳಿ ಮೂರು ಕುರಿಹಿಂಡು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವುದಕ್ಕಾಗಿ ಆ ಬಾವಿಗೆ ಹೊಡೆದುಕೊಂಡು ಬರುವುದು ವಾಡಿಕೆ. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಲ್ಲಿಗೆ ಬಂದಾಗ ಅಡವಿಯೊಳಗೆ ಬಾವಿಯನ್ನು ಕಂಡನು. ಬಾವಿಯ ಹತ್ತರ ಮೂರು ಕುರಿಹಿಂಡುಗಳು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವದಕ್ಕಾಗಿ ಆ ಬಾವಿಗೆ ಹೊಡಕೊಂಡು ಹೋಗುವ ಪದ್ಧತಿಯಿತ್ತು. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾಕೋಬನು ದೃಷ್ಟಿಸಿ ನೋಡಿದಾಗ, ಹೊಲದಲ್ಲಿ ಅವನಿಗೆ ಒಂದು ಬಾವಿ ಕಾಣಿಸಿತು. ಬಾವಿಯ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿಕೊಂಡಿದ್ದವು. ಕುರಿಗಳಿಗೆ ಆ ಬಾವಿಯ ನೀರನ್ನೇ ಕುಡಿಸುತ್ತಿದ್ದರು. ಬಾವಿಯ ಮೇಲೆ ಅಗಲವಾದ ದೊಡ್ಡ ಕಲ್ಲನ್ನು ಮುಚ್ಚಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಕಣ್ಣೆತ್ತಿ ನೋಡಲಾಗಿ, ಹೊಲದಲ್ಲಿ ಒಂದು ಬಾವಿ ಇತ್ತು. ಅದರ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿದ್ದವು. ಏಕೆಂದರೆ ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:2
12 ತಿಳಿವುಗಳ ಹೋಲಿಕೆ  

ಅಲ್ಲೇ ಯಕೋಬನ ಬಾವಿಯೂ ಇದೆ. ಪಯಣದಿಂದ ಬಳಲಿದ್ದ ಯೇಸು ಬಾವಿಯ ಬಳಿ ಕುಳಿತುಕೊಂಡರು. ಆಗ ಸುಮಾರು ಮಧ್ಯಾಹ್ನದ ಹೊತ್ತು.


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II


ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.


ಸಂಜೆ, ಹೆಣ್ಣುಮಕ್ಕಳು ನೀರು ಹೊರುವುದಕ್ಕೆ ಬರುವ ವೇಳೆಗೆ, ಅವನು ಊರ ಹೊರಗಡೆ ಬಾವಿಯ ಬಳಿ ಒಂಟೆಗಳನ್ನು ಮಲಗಿಸಿದನು.


ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.


ಹಿಂಡುಗಳೆಲ್ಲ ಅಲ್ಲಿ ಕೂಡಿದ್ದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಕುರಿಗಳಿಗೆ ನೀರು ಕುಡಿಸಿ ಮತ್ತೆ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.


ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು