Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:20 - ಕನ್ನಡ ಸತ್ಯವೇದವು C.L. Bible (BSI)

20 ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ‌ವರ್ಷ‌ಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದದರಿಂದ ಯಾಕೋಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು; ಆದರೂ ಆಕೆಯಲ್ಲಿ ಬಹಳ ಪ್ರೀತಿಯನ್ನಿಟ್ಟಿದ್ದದರಿಂದ ಅದು ಅವನಿಗೆ ಸ್ವಲ್ಪ ದಿವಸದಂತೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದ್ದರಿಂದ ಯಾಕೋಬನು ಅವನೊಂದಿಗೆ ಇದ್ದುಕೊಂಡು ಏಳು ವರ್ಷಗಳವರೆಗೆ ಲಾಬಾನನ ಸೇವೆ ಮಾಡಿದನು. ಆದರೆ ಅವನು ರಾಹೇಲಳನ್ನು ತುಂಬಾ ಪ್ರೀತಿಸುತ್ತಿದ್ದುದರಿಂದ ಆ ಸಮಯವು ಅವನಿಗೆ ತುಂಬಾ ಕಡಿಮೆಯಂತೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರ್ಷಗಳು ಅವನಿಗೆ ಸ್ವಲ್ಪದಿನಗಳಾಗಿ ತೋರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:20
14 ತಿಳಿವುಗಳ ಹೋಲಿಕೆ  

ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಯಕೋಬನು ಮೆಸಪಟೋಮಿಯಕ್ಕೆ ಓಡಿಹೋಗಬೇಕಾಯಿತು. ಅಲ್ಲಿ ಮದುವೆಗೋಸ್ಕರ ಜೀತಮಾಡಿದನು; ವಧುವಿಗೋಸ್ಕರ ಕುರಿ ಕಾಯ್ದನು.


ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.


ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.


ನಾನು ದುಡಿದು ಪಡೆದ ಹೆಂಡತಿಯರನ್ನೂ ಮಕ್ಕಳನ್ನೂ ಕಳಿಸಿಕೊಡಿ, ನಾನು ಹೊರಡುತ್ತೇನೆ. ನಿಮಗೆ ನಾನು ಮಾಡಿದ ಸೇವೆ ಎಷ್ಟೆಂದು ನಿಮಗೇ ತಿಳಿದಿದೆ,” ಎಂದು ಹೇಳಿದನು.


ಲಾಬಾನನು, “ಆಕೆಯನ್ನು ಬೇರೆ ಒಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಲೇಸು, ನನ್ನಲ್ಲೇ ತಂಗಿರು,” ಎಂದನು.


ಅವರು ನಮ್ಮನ್ನು ಅನ್ಯರೆಂದೇ ಎಣಿಸುತ್ತಾರೆ; ನಮ್ಮನ್ನು ಮಾರಿ, ನಮ್ಮ ಮೂಲಕ ದೊರಕಿದ ಹಣವನ್ನು ಅವರೇ ನುಂಗಿಬಿಟ್ಟಿದ್ದಾರೆ.


ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.


ಹಿರಿಯಳೊಡನೆ ಮದುವೆಯ ವಾರವನ್ನು ಕಳೆದುಬಿಡು; ಅನಂತರ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ. ಅವಳಿಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡುವೆಯಂತೆ,” ಎಂದನು.


ಯಕೋಬನು ರಾಖೇಲಳನ್ನು ಕೂಡಿದನು. ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿ ಇನ್ನೂ ಏಳು ವರ್ಷ ಸೇವೆಮಾಡಿದನು.


ಆ ಯುವಕನು ಯಕೋಬನ ಮಗಳಲ್ಲಿ ಅನುರಕ್ತನಾಗಿದ್ದುದರಿಂದ ಅವರು ಹೇಳಿದಂತೆ ಮಾಡಲು ಹಿಂಜರಿಯಲಿಲ್ಲ; ಅಪ್ಪನ ಮನೆಗೆ ಅವನೇ ಮುಖ್ಯಸ್ಥನಾಗಿದ್ದನು.


ದೇವರು ಪ್ರವಾದಿಯನ್ನು ಕಳುಹಿಸಿ, ಇಸ್ರಯೇಲನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಪ್ರವಾದಿಯ ಮುಖಾಂತರ ಇಸ್ರಯೇಲಿಗೆ ರಕ್ಷಣೆ ದೊರಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು