Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:34 - ಕನ್ನಡ ಸತ್ಯವೇದವು C.L. Bible (BSI)

34 ಮತ್ತೊಮ್ಮೆ ಗರ್ಭಧರಿಸಿ ಗಂಡು ಮಗುವನ್ನೇ ಹೆತ್ತಳು. “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುತ್ತೇವೆ. ಅವರಿಗೆ ಮೂರು ಮಂದಿ ಗಂಡುಮಕ್ಕಳನ್ನು ಹೆತ್ತಿದ್ದೇನಲ್ಲವೆ,” ಎಂದುಕೊಂಡು ಆ ಮಗುವಿಗೆ ‘ಲೇವಿ’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆಕೆಯು ತಿರಿಗಿ ಗರ್ಭಧರಿಸಿ ಗಂಡುಮಗುವನ್ನು ಹೆತ್ತು - ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು; ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ ಎಂದು ಹೇಳಿ ಅದಕ್ಕೆ ಲೇವಿಯೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಮತ್ತೊಮ್ಮೆ ಲೇಯಳು ಮಗನನ್ನು ಹೆತ್ತು, “ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಏಕೆಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ,” ಎಂದು ಹೇಳಿ, ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:34
11 ತಿಳಿವುಗಳ ಹೋಲಿಕೆ  

ಲೇವಿಯ ವಂಶಸ್ಥನಾದ ಒಬ್ಬನು ಲೇವಿಯ ಕುಲದ ಕನ್ಯೆಯನ್ನು ಮದುವೆಯಾದನು.


ಲೇವಿಯ ಮಕ್ಕಳು - ಗೆರ್ಷೋನ್, ಕೆಹಾತ್ ಮತ್ತು ಮೆರಾರಿ.


ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ಮೂರನೆಯ ದಿನ ಆ ಗಂಡಸರೆಲ್ಲರು ಗಾಯದಿಂದ ಇನ್ನು ಬಹಳ ಬಾಧೆಪಡುತ್ತಿದ್ದರು. ಆಗ, ಯಕೋಬನ ಮಕ್ಕಳಲ್ಲಿ ದೀನಳ ಸಹೋದರರಾದ ಸಿಮೆಯೋನ್ ಮತ್ತು ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡಿದು ನಿಶ್ಚಿಂತೆ ಇಂದಿದ್ದ ಆ ಊರಿನವರ ಮೇಲೆ ಬಿದ್ದರು. ದಯೆದಾಕ್ಷಿಣ್ಯವಿಲ್ಲದೆ ಗಂಡಸರೆಲ್ಲರನ್ನು ಕೊಂದರು.


ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು.


“ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನೆ. ಆದುದರಿಂದ ಅವರು ನನ್ನೊಡನೆಯೇ ವಾಸಿಸುವರು,” ಎಂದು ಹೆಳಿಕೊಂಡು ಆ ಮಗುವಿಗೆ ‘ಜೆಬುಲೂನ್’ ಎಂದು ಹೆಸರಿಟ್ಟಳು.


ಸಿಮೆಯೋನನ ಕುಲದಿಂದ ಹನ್ನೆರಡು ಸಾವಿರ ಲೇವಿಯ ಕುಲದಿಂದ ಹನ್ನೆರಡು ಸಾವಿರ ಇಸ್ಸಾಕರನ ಕುಲದಿಂದ ಹನ್ನೆರಡು ಸಾವಿರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು