Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:9 - ಕನ್ನಡ ಸತ್ಯವೇದವು C.L. Bible (BSI)

9 ಯಕೋಬನು ಅವರೊಂದಿಗೆ ಮಾತಾಡುತ್ತ ಇರುವಾಗಲೆ ಕುರಿಗಾಹಿ ರಾಖೇಲಳು ತನ್ನ ತಂದೆಯ ಕುರಿಗಳನ್ನು ಹೊಡೆದುಕೊಂಡು ಅಲ್ಲಿಗೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಅವರೊಂದಿಗೆ ಮಾತಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳನ್ನು ಹೊಡಕೊಂಡು ಬಂದಳು; ಆಕೆಯೇ ಅವುಗಳನ್ನು ಮೇಯಿಸುವವಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಕೋಬನು ಕುರುಬರೊಡನೆ ಮಾತಾಡುತ್ತಿರುವಾಗ ರಾಹೇಲಳು ತನ್ನ ತಂದೆಯ ಕುರಿಗಳೊಡನೆ ಬಂದಳು. (ಕುರಿಗಳನ್ನು ನೋಡಿಕೊಳ್ಳುವುದು ರಾಹೇಲಳ ಕೆಲಸವಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಕೋಬನು ಇನ್ನೂ ಅವರ ಸಂಗಡ ಮಾತನಾಡುತ್ತಿದ್ದಾಗ, ಕುರಿಗಳನ್ನು ಮೇಯಿಸುವ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:9
7 ತಿಳಿವುಗಳ ಹೋಲಿಕೆ  

ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು.


ಆತನು ಹೀಗೆ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. ಆಕೆ, ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆಂಡತಿಯಾಗಿದ್ದ ಮಿಲ್ಕಳ ಮಗ ಬೆತೂವೇಲನ ಮಗಳು.


ಅವರು, “ಇಲ್ಲ, ಕುರಿಗಾಹಿಗಳೆಲ್ಲ ಒಂದುಗೂಡಿ ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆಯುವ ತನಕ ಕುಡಿಸಕೂಡದು, ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ,” ಎಂದರು.


ತನ್ನ ಸೋದರಮಾವ ಲಾಬಾನನ ಮಗಳಾದ ಆ ರಾಖೇಲಳನ್ನೂ ಅವನ ಕುರಿಗಳನ್ನೂ ಕಂಡ ಕೂಡಲೆ ಯಕೋಬನು ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲಿದ್ದ ಕಲ್ಲನ್ನು ಸರಿಸಿ ಸೋದರಮಾವನ ಆ ಕುರಿಗಳಿಗೆ ನೀರು ಕುಡಿಸಿದನು.


ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು