ಆದಿಕಾಂಡ 3:1 - ಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವದೇವರು ಉಂಟುಮಾಡಿದ ಎಲ್ಲಾ ಭೂಜಂತುಗಳಲ್ಲಿ ಸರ್ಪವು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಯ ಬಳಿಗೆ ಬಂದು - ಏನವ್ವಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಬಾರದೆಂದು ದೇವರು ಅಪ್ಪಣೆಕೊಟ್ಟಿರುವದು ನಿಜವೋ ಎಂದು ಕೇಳಲು ಸ್ತ್ರೀಯು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರಾದ ಯೆಹೋವನು ಸೃಷ್ಟಿಸಿದ ಎಲ್ಲ ಭೂಜಂತುಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯನ್ನು ಮೋಸಗೊಳಿಸಲು ಅವಳ ಬಳಿಗೆ ಬಂದು, “ಏನಮ್ಮಾ, ಈ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು. ಅಧ್ಯಾಯವನ್ನು ನೋಡಿ |