Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:10 - ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಎಲ್ಲಿರುತ್ತಿ ಎಂದು ಕೂಗಿ ಕೇಳಲು ಅವನು - ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅಡಗಿಕೊಂಡೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಅವನು, “ನಿನ್ನ ಶಬ್ದವನ್ನು ನಾನು ತೋಟದಲ್ಲಿ ಕೇಳಿದೆ. ನಾನು ಬೆತ್ತಲೆಯಾಗಿರುವುದರಿಂದ ಭಯಪಟ್ಟು ಅಡಗಿಕೊಂಡೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:10
17 ತಿಳಿವುಗಳ ಹೋಲಿಕೆ  

ಆ ಸ್ತ್ರೀಪುರುಷರಿಬ್ಬರೂ ಬೆತ್ತಲೆ ಆಗಿದ್ದರೂ ನಾಚಿಕೊಳ್ಳಲಿಲ್ಲ.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಮುಯ್ಯಿ ತೀರಿಸುವೆನು ಯಾರನ್ನೂ ಕರುಣಿಸದೆ ಬೀದಿಪಾಲಾಗುವೆ ನೀನು ಲಜ್ಜೆಗೆಟ್ಟು, ಮಾನವಿಲ್ಲದೆ.”


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ.


ಈ ಕಾರಣ ಆತನ ಸನ್ನಿಧಿಯಲಿ ನಾನು ಅಂಜುಬುರುಕ ಇದನ್ನು ನೆನೆದು ಮನದಲಿ ನಾನು ಭಯಪೀಡಿತ.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಇಸ್ರಯೇಲರು ಅಂಕೆಮೀರಿ ಇಷ್ಟಬಂದಂತೆ ನಡೆದುಕೊಳ್ಳಲು ಆರೋನನು ಬಿಟ್ಟುಬಿಟ್ಟಿದ್ದನು. ಈ ಕಾರಣ ಅವರು ವಿರೋಧಿಗಳ ಅಪಹಾಸ್ಯಕ್ಕೆ ಗುರಿಯಾಗಿದ್ದರು.


ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆ ಆಗಿದ್ದೇವೆಂದು ತಿಳಿದು ಅವರು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು.


“ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು.


ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.


ಅವರು ಮೋಶೆಗೆ, “ನೀನೇ ನಮ್ಮೊಡನೆ ಮಾತಾಡು, ನಾವು ಕೇಳುತ್ತೇವೆ. ದೇವರು ನಮ್ಮೊಡನೆ ಮಾತಾಡಿದರೆ ನಾವು ಸತ್ತು ಹೋಗುತ್ತೇವೆ,” ಎಂದು ಹೇಳಿದರು.


ಹಾಗಿದ್ದರೂ ಈಗ ನಾವೇಕೆ ಪ್ರಾಣಾಪಾಯಕ್ಕೆ ಗುರಿಯಾಗಬೇಕು? ಬಹುಶಃ ಈ ಘೋರ ಬೆಂಕಿ ನಮ್ಮನ್ನು ದಹಿಸಿಬಿಡಬಹುದು; ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ನಾವು ಮತ್ತೆ ಕೇಳಿದರೆ ಸಾಯಬಹುದು.


ಜನಸಮುದಾಯಕ್ಕೆ ನಾನು ಹೆದರಿದ್ದರೆ ಕುಲೀನರ ತಿರಸ್ಕಾರಕ್ಕೆ ನಾನು ಬೆದರಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು