Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:12 - ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಮನುಷ್ಯನು - ನನ್ನ ಜೊತೆಯಲ್ಲಿರುವದಕ್ಕೆ ನೀನು ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ಪುರುಷನು, “ನೀನು ನನಗಾಗಿ ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ಆದ್ದರಿಂದ ನಾನು ತಿಂದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ಮನುಷ್ಯನು, “ನೀನು ನನ್ನ ಸಂಗಡ ಇರಿಸಿದ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು. ನಾನು ತಿಂದೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:12
13 ತಿಳಿವುಗಳ ಹೋಲಿಕೆ  

ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ಜನಸಮುದಾಯಕ್ಕೆ ನಾನು ಹೆದರಿದ್ದರೆ ಕುಲೀನರ ತಿರಸ್ಕಾರಕ್ಕೆ ನಾನು ಬೆದರಿದ್ದರೆ,


ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.


ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.


ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.


ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು.


ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ.


“ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು.


ಸೌಲನು, “ಜನರು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಸಲ್ಲಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು