Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:15 - ಕನ್ನಡ ಸತ್ಯವೇದವು C.L. Bible (BSI)

15 ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:15
48 ತಿಳಿವುಗಳ ಹೋಲಿಕೆ  

ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.


ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.


“ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ!


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.


“ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”


ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ?


ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು.


ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.”


ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.


“ಎಲೈ ಸರ್ಪಗಳೇ, ವಿಷಸರ್ಪಗಳ ಪೀಳಿಗೆಯೇ, ನರಕ ದಂಡನೆಯಿಂದ ನೀವು ಹೇಗೆ ತಾನೆ ಪಾರಾಗುವಿರಿ? ಇಗೋ ಕೇಳಿ: ‘ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಪಂಡಿತರನ್ನೂ ಧರ್ಮಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.


ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು.


ಇರುವನವನು ದಾರಿಯಲ್ಲಿರುವ ವಿಷಸರ್ಪದಂತೆ, ಕುದುರೆಯ ಹಿಮ್ಮಡಿಕಚ್ಚಿ ರಾಹುತನನು ಕೆಡವುವ ಹಾವಿನಂತೆ.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು