Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:17 - ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು ಪುರುಷನಿಗೆ - ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನೀನು ಹೆಂಡತಿಯ ಮಾತು ಕೇಳಿ ತಿಂದಕಾರಣ ನಿನ್ನ ನಿವಿುತ್ತ ಭೂವಿುಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ದುಡಿದು ದುಡಿದು ಭೂವಿುಯ ಹುಟ್ಟುವಳಿಯನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:17
28 ತಿಳಿವುಗಳ ಹೋಲಿಕೆ  

ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II


ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ.


“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಆ ದುರುಳರ ದೀಪ ಆರಿಹೋದದ್ದು ಎಷ್ಟುಸಾರಿ? ಅವರಿಗೆ ವಿಪತ್ತು ಸಂಭವಿಸಿದ್ದು ಎಷ್ಟುಸಾರಿ? ಅವರ ಕೋಪ ಅವರಿಗೆ ಸಂಕಟ ತಂದದ್ದು ಎಷ್ಟುಬಾರಿ?


ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ಲೋಕದ ಆಗುಹೋಗುಗಳು ಕೇಡಿಗೆ ಈಡಾಗುವುವೆಂದು ನನಗೆ ಕಂಡುಬಂದಿತು. ಜೀವನವೇ ನೀರಸವೆಂದು ನನಗೆ ತೋಚಿತು; ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಸಮಸ್ತವೂ ವ್ಯರ್ಥವೇ ಸರಿ!


ಆಗ ನಾನೇ ಸ್ವತಃ ಮಾಡಿದ ಎಲ್ಲಾ ಕೆಲಸಕಾರ್ಯಗಳನ್ನೂ ಪಟ್ಟ ಎಲ್ಲ ಪ್ರಯಾಸವನ್ನೂ ಗಮನವಿಟ್ಟು ಪರಿಶೀಲಿಸಿದೆ. ಆದರೆ ಇಗೋ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಎಲ್ಲವೂ ವ್ಯರ್ಥ; ಲೋಕದಲ್ಲಿ ಲಾಭಕರವಾದುದು ಏನೂ ಕಾಣಲಿಲ್ಲ.


“ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ.


ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು