Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:20 - ಕನ್ನಡ ಸತ್ಯವೇದವು C.L. Bible (BSI)

20 ಆದಾಮನು ತನ್ನ ಹೆಂಡತಿಗೆ “ಹವ್ವ" ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು; ಯಾಕಂದರೆ ಬದುಕುವವರೆಲ್ಲರಿಗೂ ಅವಳೇ ಮೂಲಮಾತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದಾಮನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದಾಮನು ಹವ್ವ ಎಂದು ಹೆಸರಿಡಲು ಕಾರಣವೇನೆಂದರೆ ಈ ಲೋಕದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಆಕೆಯೇ ಮೂಲ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಏಕೆಂದರೆ ಆಕೆಯೇ ಬದುಕಿದವರಿಗೆಲ್ಲಾ ತಾಯಿಯಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:20
14 ತಿಳಿವುಗಳ ಹೋಲಿಕೆ  

“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು.


ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು.


ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ.


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.


ಆ ಹುಡುಗನು ಬೆಳೆದಾಗ ಅವನನ್ನು ಫರೋಹನ ಪುತ್ರಿಯ ಬಳಿಗೆ ಕರೆದುಕೊಂಡು ಬಂದಳು. ಅವನು ಆಕೆಗೆ ಮಗನಾದನು. “ನೀರಿನಿಂದ ನಾನು ಇವನನ್ನು ಎತ್ತಿದೆ” ಎಂದು ಹೇಳಿ ಆಕೆ ಅವನಿಗೆ “ಮೋಶೆ" ಎಂದು ಹೆಸರಿಟ್ಟಳು.


ಆದರೆ ರಾಖೇಲಳು ಸತ್ತುಹೋದಳು. ಪ್ರಾಣಹೋಗುತ್ತಿದ್ದಾಗ ಆಕೆ ಆ ಮಗುವಿಗೆ ‘ಬೆನೋನಿ’ ಎಂದು ಹೆಸರಿಟ್ಟಳು. ಅದರ ತಂದೆಯಾದರೋ ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು.


ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಏಕೆಂದರೆ, ದೇವರು ಮೊದಲು ಆದಾಮನನ್ನು, ಅನಂತರ ಹವ್ವಳನ್ನು ಸೃಷ್ಟಿಸಿದರು.


ಸರ್ವೇಶ್ವರನಾದ ದೇವರು ಆದಾಮನಿಗೂ ಆತನ ಹೆಂಡತಿಗೂ ಚರ್ಮದ ಅಂಗಿಗಳನ್ನು ತೊಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು