ಆದಿಕಾಂಡ 3:22 - ಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮತ್ತು ಯೆಹೋವದೇವರು - ಈ ಮನುಷ್ಯನು ಒಳ್ಳೇದರ ಕೆಟ್ಟದ್ದರ ಭೇದವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ. ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತೆಗೆದು ತಿಂದು ಶಾಶ್ವತವಾಗಿ ಬದುಕುವವನಾಗಬಾರದು ಅಂದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು. ಅಧ್ಯಾಯವನ್ನು ನೋಡಿ |