Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಆ ಸರ್ಪ, “ಆ ಮಾತು ನಿಜವಲ್ಲ, ನೀವು ಸಾಯುವುದು ಸುಳ್ಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಸರ್ಪವು ಸ್ತ್ರೀಗೆ - ನೀವು ಹೇಗೂ ಸಾಯುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕೆ ಸರ್ಪವು ಸ್ತ್ರೀಗೆ, “ನೀವು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:4
13 ತಿಳಿವುಗಳ ಹೋಲಿಕೆ  

ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಅಲ್ಲದೆ, ಮೊದಲು ವಂಚನೆಗೊಳಗಾಗಿ ದೇವರಿಗೆ ವಿರುದ್ಧ ಪಾಪಮಾಡಿದವಳು ಹವ್ವಳೇ ಹೊರತು ಆದಾಮನಲ್ಲ.


ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.


ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು.


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


ಆಗ ದೈವಪುರುಷನಾದ ಎಲೀಷನು, “ಖಂಡಿತವಾಗಿ ಗುಣವಾಗುವುದು ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತುಹೋಗುವುದು ನಿಶ್ಚಯವೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,”


ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು.


ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.


ಈ ಕಾರಣ ಅಹಜ್ಯನು ತಾನು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು,” ಎಂದು ಆಜ್ಞಾಪಿಸಿದರು. ಎಲೀಯನು ಹಾಗೆಯೇ ಮಾಡಿದನು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.


ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು.


‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು’, ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ ಅದಕ್ಕೆ, ‘ಹೋಗಿ ಅದರಂತೆಯೇ ಮಾಡು; ಅವನನ್ನು ಪ್ರೇರೇಪಿಸಿ ಸಫಲನಾಗುವೆ’, ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು