Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:6
19 ತಿಳಿವುಗಳ ಹೋಲಿಕೆ  

ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.


ಅಲ್ಲದೆ, ಮೊದಲು ವಂಚನೆಗೊಳಗಾಗಿ ದೇವರಿಗೆ ವಿರುದ್ಧ ಪಾಪಮಾಡಿದವಳು ಹವ್ವಳೇ ಹೊರತು ಆದಾಮನಲ್ಲ.


ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.


“ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.


ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.


“ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟು ಸುಂದರ ಆಲಯವನ್ನೂ ಹೃದಯೋಲ್ಲಾಸವಾದ ಅವನ ಗಂಡು ಹೆಣ್ಣುಮಕ್ಕಳನ್ನೂ ನಾನು ನಿರ್ಮೂಲಮಾಡುವ ದಿನದಲ್ಲಿ


“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ.


ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಜೋಸೆಫನದು ಸೊಗಸಾದ ಮೈಕಟ್ಟು, ಸುಂದರವಾದ ರೂಪು. ಹೀಗಿರಲು ಅವನ ದಣಿಯ ಪತ್ನಿ ಅವನ ಮೇಲೆ ಕಣ್ಣುಹಾಕಿದಳು. "ನನ್ನೊಡನೆ ಹಾಸಿಗೆಗೆ ಬಾ,” ಎಂದು ಕರೆದಳು.


ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.


ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು


“ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು.


ಆಕೆ ಔತಣದ ಏಳು ದಿನಗಳಲ್ಲೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನ ಆಕೆ ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳೇಬಿಟ್ಟನು. ಆಕೆ ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು