Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:7 - ಕನ್ನಡ ಸತ್ಯವೇದವು C.L. Bible (BSI)

7 ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆ ಆಗಿದ್ದೇವೆಂದು ತಿಳಿದು ಅವರು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು; ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೂಡಲೇ ಪುರುಷನಲ್ಲಿಯೂ ಸ್ತ್ರೀಯಲ್ಲಿಯೂ ಬದಲಾವಣೆಗಳಾದವು. ಅವರ ಕಣ್ಣುಗಳು ತೆರೆದವು. ಅವರಿಗೆ ಎಲ್ಲವೂ ವಿಚಿತ್ರವಾಗಿ ಕಂಡವು. ತಾವು ಬೆತ್ತಲೆಯಿಂದಿರುವುದನ್ನು ಕಂಡು ಅಂಜೂರದ ಎಲೆಗಳನ್ನು ಕಿತ್ತು ಒಂದಕ್ಕೊಂದು ಜೋಡಿಸಿ ಸುತ್ತಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು, ಅವರು ಅಂಜೂರದ ಎಲೆಗಳನ್ನು ತೆಗೆದುಕೊಂಡು ತಮಗೆ ತಾವೇ ಉಡುಪುಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:7
13 ತಿಳಿವುಗಳ ಹೋಲಿಕೆ  

ನಿಮ್ಮ ಆ ಬಲೆಯು ನೂಲು ಬಟ್ಟೆಯಾಗದು. ನೀವು ನೇಯ್ದದ್ದು ಹೊದಿಕೆಯಾಗದು. ನಿಮ್ಮ ಕಾರ್ಯಗಳು ಅಕ್ರಮವಾದುವು. ನಿಮ್ಮ ಕೈಕೆಲಸಗಳು ಹಿಂಸಾತ್ಮಕವಾದುವು.


ಆ ಸ್ತ್ರೀಪುರುಷರಿಬ್ಬರೂ ಬೆತ್ತಲೆ ಆಗಿದ್ದರೂ ನಾಚಿಕೊಳ್ಳಲಿಲ್ಲ.


ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು.


ನೀವಾದರೋ ಕಾಲು ಚಾಚಲು ಚಾಪೆ ಸಾಲದವನಂತೆ, ಹೊದ್ದುಕೊಳ್ಳಲು ಕಂಬಳಿ ಸಾಲದವನಂತೆ ಇರುವಿರಿ.


ಅವರು ಸಮಾರಿಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದು ಸರ್ವೇಶ್ವರನನ್ನು ಬೇಡಿಕೊಂಡನು. ಅಂತೆಯೇ ಸರ್ವೇಶ್ವರ ಅವರ ಕಣ್ಣುಗಳನ್ನು ತೆರೆದರು. ಆಗ ಅವರಿಗೆ ತಾವು ಸಮಾರಿಯದಲ್ಲಿದ್ದೇವೆಂದು ತಿಳಿದುಬಂದಿತು.


ನಿಮ್ಮ ಮುಂದೆ ನಡೆಯುವ ದೃಶ್ಯಗಳನ್ನು ನೋಡಿ ಹುಚ್ಚರಾಗಿಹೋಗುವಿರಿ.


ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.


ಮುಯ್ಯಿ ತೀರಿಸುವೆನು ಯಾರನ್ನೂ ಕರುಣಿಸದೆ ಬೀದಿಪಾಲಾಗುವೆ ನೀನು ಲಜ್ಜೆಗೆಟ್ಟು, ಮಾನವಿಲ್ಲದೆ.”


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು:


ಅಲ್ಪವೆಂದೆಣಿಸುವ ಅಂಗಗಳನ್ನು ಅಧಿಕವಾಗಿ ಮಾನ್ಯಮಾಡುತ್ತೇವೆ. ಗೋಪ್ಯವಾಗಿಡತಕ್ಕವುಗಳನ್ನು ಶೀಲದಿಂದ ಸಂರಕ್ಷಿಸುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು