Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:1 - ಕನ್ನಡ ಸತ್ಯವೇದವು C.L. Bible (BSI)

1 ರಾಖೇಲಳು ತಾನು ಯಕೋಬನಿಗೆ ಮಕ್ಕಳನ್ನು ಹೆರಲಿಲ್ಲವೆಂದುಕೊಂಡು ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚು ಪಟ್ಟಳು. ಅಲ್ಲದೆ ಯಕೋಬನಿಗೆ, “ನನಗೆ ಮಕ್ಕಳನ್ನು ಕೊಡು; ಇಲ್ಲದಿದ್ದರೆ ಸಾಯುತ್ತೇನೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರಾಹೇಲಳು ತಾನು ಮಕ್ಕಳನ್ನು ಹೆರದೆ ಇರುವದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು ಯಾಕೋಬನಿಗೆ - ಮಕ್ಕಳನ್ನು ನನಗೆ ಕೊಡು; ಇಲ್ಲದಿದ್ದರೆ ಸಾಯುವೆನು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರಲಿಲ್ಲ ಎಂದು ತಿಳಿದಾಗ, ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೆಕಿಚ್ಚು ಪಟ್ಟು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:1
26 ತಿಳಿವುಗಳ ಹೋಲಿಕೆ  

ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.


ಅಣ್ಣಂದಿರೋ ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ತಂದೆ ಈ ವಿಷಯವನ್ನು ಮನಸ್ಸಿನಲ್ಲೇ ಮೆಲುಕುಹಾಕಿದ.


ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


ಶಾಂತಗುಣವು ದೇಹಕ್ಕೆ ಆರೋಗ್ಯದಾಯಕವು; ಹೊಟ್ಟೆಕಿಚ್ಚು ಎಲುಬಿಗೆ ಕ್ಷಯ ರೋಗವು.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.


ಶಿಷ್ಯರು ಊಟಕ್ಕೆ ಏನಾದರೂ ಕೊಂಡುತರುವುದಕ್ಕೆ ಊರಿನೊಳಗೆ ಹೋಗಿದ್ದರು.


ಯೇಸು ಇದನ್ನು ತಿಳಿದು ಜುದೇಯವನ್ನು ಬಿಟ್ಟು ಮತ್ತೆ ಗಲಿಲೇಯಕ್ಕೆ ಹೊರಟರು.


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಅಸೂಯೆಗೊಂಡರು ಪಾಳೆಯದೊಳು ಮೋಶೆಯ ಮೇಲೆ I ಪ್ರಭುವಿಗೆ ಪ್ರತಿಷ್ಠಿತನಾದ ಆ ಆರೋನನ ಮೇಲೆ II


ದೇವಾ, ನನ್ನ ಮೇಲೆ ಆಪಾದನೆ ಹೊರಿಸಲು ಬರುವೆಯಾ? ಹಾಗಾದರೆ ಮೌನತಾಳಿ ನಾ ಮಾಡುವೆ ಪ್ರಾಣತ್ಯಾಗ.


ಹುಟ್ಟುವಾಗಲೇ ನಾನೇಕೆ ಸಾಯಲಿಲ್ಲ? ಉದರದಿಂದ ಬಂದೊಡನೆ ನಾನೇಕೆ ಮಡಿಯಲಿಲ್ಲ?


ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.


ಅದಕ್ಕೆ ಮೋಶೆ, “ನನ್ನ ಗೌರವ ಕಾಪಾಡಲು ನಿನಗೇಕೆ ಅಸೂಯೆ? ಸರ್ವೇಶ್ವರನ ಅನುಗ್ರಹದಿಂದ ಅವರ ಜನರೆಲ್ಲರೂ ಆತ್ಮಶಕ್ತಿಯನ್ನು ಹೊಂದಿ ಪ್ರವಾದಿಸುವವರಾದರೆ ಎಷ್ಟೋ ಒಳ್ಳೆಯದು” ಎಂದನು.


ನೀವು ಹೀಗೆ ಮಾಡುವುದಕ್ಕಿಂತಲೂ ನನ್ನನ್ನು ಈ ಕೂಡಲೆ ಕೊಂದುಹಾಕಿದರೆ ಉಪಕಾರವಾದೀತು; ನನಗಾಗುತ್ತಿರುವ ಸಂಕಟವನ್ನು ಸಹಿಸಲಾರೆ,” ಎಂದನು.


ಅವು ಯಾವುದೆಂದರೆ: ಪಾತಾಳ, ಹೆರದ ಗರ್ಭ, ನೀರಿಗಾಗಿ ಹಾತೊರೆಯುವ ಭೂಮಿ, ‘ಸಾಕಾಯಿತು’ ಎನ್ನದ ಬೆಂಕಿ.


ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು