Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:17 - ಕನ್ನಡ ಸತ್ಯವೇದವು C.L. Bible (BSI)

17 ದೇವರು ಲೆಯಳ ಪ್ರಾರ್ಥನೆಯನ್ನು ಕೇಳಿದರು. ಆಕೆ ಗರ್ಭಿಣಿಯಾಗಿ ಯಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು; ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡುಮಗುವನ್ನು ಹೆತ್ತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಲೇಯಳು ಮತ್ತೆ ಬಸುರಾಗುವಂತೆ ದೇವರು ಅನುಗ್ರಹಿಸಿದನು. ಆಕೆ ತನ್ನ ಐದನೆಯ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದ್ದರಿಂದ, ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:17
8 ತಿಳಿವುಗಳ ಹೋಲಿಕೆ  

ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಇದಾದ ಬಳಿಕ ದೇವರು ರಾಖೇಲಳನ್ನು ನೆನೆಸಿಕೊಂಡರು. ಆಕೆಯ ಮೊರೆಯನ್ನು ಕೇಳಿ ಆಕೆಗೂ ಮಕ್ಕಳಾಗುವಂತೆ ಅನುಗ್ರಹಿಸಿದರು.


ಆಗ ರಾಖೇಲಳು, “ದೇವರು ನನಗೆ ನ್ಯಾಯ ದೊರಕಿಸಿದ್ದಾರೆ, ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾರೆ,” ಎಂದು ಹೇಳಿ ಆ ಮಗುವಿಗೆ ‘ದಾನ್’ ಎಂದು ಹೆಸರಿಟ್ಟಳು.


ಸಂಜೆ ಯಕೋಬನು ಹೊರಗಡೆಯಿಂದ ಬಂದಾಗ ಲೇಯಳು ಅವನೆದುರಿಗೆ ಹೋಗಿ, “ನೀವು ನನ್ನೊಡನೆ ಕೂಡಬೇಕು. ನಾನು ನನ್ನ ಮಗ ತಂದ ಕಾಮೋದ್ದೀಪಕ ಹಣ್ಣುಗಳನ್ನು ಕೊಟ್ಟು ನಿಮ್ಮನ್ನು ಕೊಂಡುಕೊಂಡಿದ್ದೇನೆ,” ಎಂದಳು. ಅಂದಿನ ರಾತ್ರಿ ಯಕೋಬನು ಆಕೆಯೊಡನೆ ಕೂಡಿದನು.


“ನಾನು ನನ್ನ ದಾಸಿಯನ್ನು ಗಂಡನಿಗೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ಆಕೆ ಆ ಮಗುವಿಗೆ ‘ಇಸ್ಸಾಕಾರ್’ ಎಂದು ಹೆಸರಿಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು