Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:2 - ಕನ್ನಡ ಸತ್ಯವೇದವು C.L. Bible (BSI)

2 ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, "ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಆಕೆಯ ಮೇಲೆ ಕೋಪಗೊಂಡು - ದೇವರು ನಿನಗೆ ಮಕ್ಕಳನ್ನು ಕೊಡದೆಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾಕೋಬನಿಗೆ ರಾಹೇಲಳ ಮೇಲೆ ಕೋಪವಾಯಿತು. ಅವನು ಆಕೆಗೆ, “ನಾನು ದೇವರಲ್ಲ. ನಿನಗೆ ಮಕ್ಕಳಾಗದಂತೆ ಮಾಡಿರುವವನು ದೇವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿಕೊಂಡು, “ನಿನಗೆ ಗರ್ಭ ಫಲವನ್ನು ಕೊಡುವ ದೇವರ ಸ್ಥಾನದಲ್ಲಿ ನಾನಿದ್ದೇನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:2
17 ತಿಳಿವುಗಳ ಹೋಲಿಕೆ  

ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.


ಅವನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದರೂ ಒಂದು ಭಾಗವನ್ನು ಮಾತ್ರ ಆಕೆಗೆ ಕೊಡುತ್ತಾ ಇದ್ದನು. ಏಕೆಂದರೆ ಸರ್ವೇಶ್ವರ ಆಕೆಗೆ ಮಕ್ಕಳನ್ನು ಕೊಟ್ಟಿರಲಿಲ್ಲ.


ಆದರೆ ಜೋಸೆಪನು ಅವರಿಗೆ, “ಹೆದರಬೇಡಿ; ನಾನು ದೇವರ ಸ್ಥಾನದಲ್ಲಿ ಇಲ್ಲ;


ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II


ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು.


ಆಗ ಯಕೋಬನಿಗೆ ಸಿಟ್ಟು ಬಂದಿತು, ಅವನು ಲಾಬಾನನೊಡನೆ ಹೀಗೆಂದು ವಾಗ್ವಾದ ಮಾಡಿದನು - “ನೀವು ಇಷ್ಟು ಆತುರಪಟ್ಟು ನನ್ನನ್ನು ಹಿಂದಟ್ಟಿ ಬರಲು ನಾನು ಮಾಡಿದ ತಪ್ಪೇನು?


ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.


ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.


ಇದಕ್ಕೆ ಮುಂಚೆ ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರೆಲ್ಲರನ್ನು ಸರ್ವೇಶ್ವರ ಸ್ವಾಮಿ ಬಂಜೆಯರನ್ನಾಗಿಸಿದ್ದರು.


ಹರ್ಷೋದ್ಗಾರದಿಂದ ಹೀಗೆಂದಳು: “ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು