Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:22 - ಕನ್ನಡ ಸತ್ಯವೇದವು C.L. Bible (BSI)

22 ಇದಾದ ಬಳಿಕ ದೇವರು ರಾಖೇಲಳನ್ನು ನೆನೆಸಿಕೊಂಡರು. ಆಕೆಯ ಮೊರೆಯನ್ನು ಕೇಳಿ ಆಕೆಗೂ ಮಕ್ಕಳಾಗುವಂತೆ ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಮೇಲೆ ದೇವರು ರಾಹೇಲಳನ್ನು ನೆನಪಿಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಮೇಲೆ ದೇವರು ರಾಹೇಲಳನ್ನು ನೆನಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಂತರ, ದೇವರು ರಾಹೇಲಳ ಪ್ರಾರ್ಥನೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿಕೊಂಡರು. ದೇವರು ಆಕೆಯ ಮೊರೆಯನ್ನು ಕೇಳಿ, ಆಕೆಗೆ ಮಕ್ಕಳಾಗುವಂತೆ ಅನುಗ್ರಹಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:22
11 ತಿಳಿವುಗಳ ಹೋಲಿಕೆ  

ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.


ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.


ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II


ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, "ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಸ್ಮರಿಸಿಕೊಂಡನು ಪ್ರಭು ತನ್ನ ವಾಗ್ದಾನವನು I ತನ್ನ ದಾಸ ಅಬ್ರಹಾಮನಿಗೆ ಕೊಟ್ಟಾ ಮಾತನು II


ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.


ತರುವಾಯ ಆಕೆ ಒಂದು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ ‘ದೀನಾ’ ಎಂದು ನಾಮಕರಣ ಮಾಡಿದಳು.


ಜೋಸೆಫ್, ಬೆನ್ಯಾಮೀನ್ - ಇವರಿಬ್ಬರು ರಾಖೇಲಳಲ್ಲಿ ಹುಟ್ಟಿದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು