Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:24 - ಕನ್ನಡ ಸತ್ಯವೇದವು C.L. Bible (BSI)

24 ಸರ್ವೇಶ್ವರ ನನಗೆ ಇನ್ನೂ ಒಂದು ಗಂಡು ಮಗುವನ್ನು ಅನುಗ್ರಹಿಸಲಿ,” ಎಂದುಕೊಂಡು ಆ ಮಗುವಿಗೆ ‘ಜೋಸೆಫ್’ ಎಂದು ನಾಮಕರಣ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಆಕೆಯು - ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸಬೇಕೆಂದು ಅದಕ್ಕೆ ಯೋಸೇಫನೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಕೆಯು, “ಯೆಹೋವ ದೇವರು ನನಗೆ ಮತ್ತೊಬ್ಬ ಮಗನನ್ನು ದಯಪಾಲಿಸುವರು,” ಎಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:24
14 ತಿಳಿವುಗಳ ಹೋಲಿಕೆ  

ಜೋಸೆಫ್, ಬೆನ್ಯಾಮೀನ್ - ಇವರಿಬ್ಬರು ರಾಖೇಲಳಲ್ಲಿ ಹುಟ್ಟಿದವರು.


ಜೆಬುಲೋನನ ಕುಲದಿಂದ ಹನ್ನೆರಡು ಸಾವಿರ ಜೋಸೆಫನ ಕುಲದಿಂದ ಹನ್ನೆರಡು ಸಾವಿರ ಬೆನ್ಯಮೀನನ ಕುಲದಿಂದ ಹನ್ನೆರಡು ಸಾವಿರ.


ಆಗ ಜೋಸೆಫನಿಗೆ ಹದಿನೇಳು ವರ್ಷ, ಇನ್ನೂ ಯುವಕ, ತನ್ನ ಅಣ್ಣಂದಿರ ಜೊತೆಯಲ್ಲಿ, ಅಂದರೆ ತನ್ನ ಮಲತಾಯಿಯರಾದ ಬಿಲ್ಹಾ, ಜಿಲ್ಪಾ ಎಂಬುವರ ಮಕ್ಕಳ ಜೊತೆಯಲ್ಲಿ, ಆಡುಕುರಿಗಳನ್ನು ಮೇಯಿಸುತ್ತಿದ್ದ, ಅಣ್ಣಂದಿರು ಏನಾದರೂ ತಪ್ಪಿ ನಡೆದರೆ ತಂದೆಗೆ ವರದಿ ಮಾಡುತ್ತಿದ್ದ.


ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


“ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ ‘ಜುದೇಯದ್ದು, ಜುದೇಯಕ್ಕೆ ಸೇರಿದ ಇಸ್ರಯೇಲರದು’ ಎಂದು ಬರೆ; ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ, ‘ಜೋಸೆಫನದು, ಎಫ್ರಯಿಮಿನದು, ಜೊಸೇಫಿಗೆ ಸೇರಿದ ಎಲ್ಲ ಇಸ್ರಯೇಲರದು’ ಎಂದು ಬರೆ;


ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆಹೋದರು.


ರಾಖೇಲಳು ಜೋಸೆಫನನ್ನು ಹೆತ್ತ ಬಳಿಕ ಯಕೋಬನು ಲಾಬಾನನಿಗೆ, “ನನಗೆ ಅಪ್ಪಣೆಯಾಗಬೇಕು, ನಾನು ಸ್ವಂತ ಊರಿಗೂ ನಾಡಿಗೂ ಹಿಂದಿರುಗಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು