Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:26 - ಕನ್ನಡ ಸತ್ಯವೇದವು C.L. Bible (BSI)

26 ನಾನು ದುಡಿದು ಪಡೆದ ಹೆಂಡತಿಯರನ್ನೂ ಮಕ್ಕಳನ್ನೂ ಕಳಿಸಿಕೊಡಿ, ನಾನು ಹೊರಡುತ್ತೇನೆ. ನಿಮಗೆ ನಾನು ಮಾಡಿದ ಸೇವೆ ಎಷ್ಟೆಂದು ನಿಮಗೇ ತಿಳಿದಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ಸೇವೆಮಾಡಿ ಪಡೆದುಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಾನು ಸೇವೆ ಮಾಡಿ ಪಡಕೊಂಡ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನಗೆ ಒಪ್ಪಿಸು; ನಾನು ಹೋಗುತ್ತೇನೆ. ನಾನು ನಿನಗೆ ಮಾಡಿದ ಸೇವೆ ನಿನಗೆ ತಿಳಿದೇ ಅದೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನ್ನ ಹೆಂಡತಿಯರನ್ನೂ ಮಕ್ಕಳನ್ನೂ ನನಗೆ ಕೊಡು. ನಾನು ಹದಿನಾಲ್ಕು ವರ್ಷ ನಿನ್ನ ಸೇವೆಮಾಡಿ ಅವರನ್ನು ಸಂಪಾದಿಸಿಕೊಂಡಿದ್ದೇನೆ. ನಾನು ನಿನಗೆ ಒಳ್ಳೆಯ ಸೇವೆ ಮಾಡಿರುವುದು ನಿನಗೆ ತಿಳಿದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ಯಾರಿಗೋಸ್ಕರ ನಿನಗೆ ಸೇವೆ ಮಾಡಿದೆನೋ, ಆ ನನ್ನ ಹೆಂಡತಿಯರನ್ನೂ, ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀಯೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:26
9 ತಿಳಿವುಗಳ ಹೋಲಿಕೆ  

ಯಕೋಬನು ಮೆಸಪಟೋಮಿಯಕ್ಕೆ ಓಡಿಹೋಗಬೇಕಾಯಿತು. ಅಲ್ಲಿ ಮದುವೆಗೋಸ್ಕರ ಜೀತಮಾಡಿದನು; ವಧುವಿಗೋಸ್ಕರ ಕುರಿ ಕಾಯ್ದನು.


ಯಕೋಬನು ರಾಖೇಲಳನ್ನು ಕೂಡಿದನು. ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿ ಇನ್ನೂ ಏಳು ವರ್ಷ ಸೇವೆಮಾಡಿದನು.


ಅದಕ್ಕೆ ಪ್ರತ್ಯುತ್ತರವಾಗಿ ಯಕೋಬನು, “ನೀವು ನಿಮ್ಮ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಕಿತ್ತುಕೊಳ್ಳುವಿರಿ ಎಂದು ಭಯಪಟ್ಟು ಹೀಗೆ ಹೊರಟು ಬಂದೆ.


ಲಾಬಾನನು ಯಕೋಬನಿಗೆ, “ನೀನು ಹೀಗೆ ಮಾಡಬಹುದೆ? ನನ್ನ ಹೆಣ್ಣು ಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದ ಕೈದಿಗಳಂತೆ ಎಳೆದುಕೊಂಡು ಓಡಿಬಂದಿರುವೆಯಲ್ಲಾ;


ನಿಮಗೆ ತಿಳಿದಿರುವಂತೆ ನಾನು ನಿಮ್ಮ ತಂದೆಗೆ ಶಕ್ತಿಮೀರಿ ಸೇವೆಸಲ್ಲಿಸಿದ್ದೇನೆ.


ಯಕೋಬನಿಗೆ ರಾಖೇಲಳ ಮೇಲೆ ಪ್ರೀತಿ. ಎಂತಲೇ, “ನಿಮ್ಮ ಕಿರಿಯ ಮಗಳು ರಾಖೇಲಳಿಗೋಸ್ಕರ ನಿಮ್ಮಲ್ಲಿ ಏಳು ವರುಷ ಸೇವೆಮಾಡುತ್ತೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು