Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:27 - ಕನ್ನಡ ಸತ್ಯವೇದವು C.L. Bible (BSI)

27 ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಲಾಬಾನನು ಅವನಿಗೆ - ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ಇರು; ಯೆಹೋವನು ನಿನ್ನ ನಿವಿುತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:27
25 ತಿಳಿವುಗಳ ಹೋಲಿಕೆ  

ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


ಆಗ ರೂತಳು, “ಒಡೆಯಾ, ತಾವು ನನಗೆ ದೊಡ್ಡ ಉಪಕಾರವನ್ನು ಮಾಡಿದ್ದೀರಿ. ನಾನು ತಮ್ಮ ದಾಸಿ ಎನಿಸಿಕೊಳ್ಳುವುದಕ್ಕೂ ಯೋಗ್ಯಳಲ್ಲ. ಆದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿದ್ದೀರಿ,” ಎಂದು ಹೇಳಿದಳು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


“ನನ್ನ ಜನರಿಗೆ ಈಜಿಪ್ಟಿನವರು ಅನುಕಂಪ ತೋರಿಸುವಂತೆ ಮಾಡುವೆನು. ಆದ್ದರಿಂದ ನೀವು ಅಲ್ಲಿಂದ ಹೊರಡುವಾಗ ಬರಿಗೈಯಲ್ಲಿ ಹೋಗಬೇಕಾಗುವುದಿಲ್ಲ.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ಅದಕ್ಕೆ ಅವರು, ನಮ್ಮ ಪ್ರಾಣಗಳನ್ನು ಉಳಿಸಿದ್ದೀರಿ. ನಮ್ಮ ದಣಿಗಳಾದ ನಿಮ್ಮ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಊಳಿಗದವರಾಗಿರುತ್ತೇವೆ,” ಎಂದರು.


ಏಸಾವನು, “ಹಾಗಾದರೆ, ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟುಹೋಗುತ್ತೇನೆ,” ಎಂದನು. ಯಕೋಬನು, “ಏತಕ್ಕೆ, ಬೇಡಿ, ನನ್ನೊಡೆಯರ ದಯೆ ನನ್ನ ಮೇಲಿದ್ದರೆ ಸಾಕು,” ಎಂದು ಹೇಳಿದನು.


ನಾನು ಬರುವುದಕ್ಕೆ ಮೊದಲು ನಿಮಗಿದ್ದ ಕೆಲವು ಈಗ ಬಹಳವಾಗಿ ಹೆಚ್ಚಿವೆ. ನಾನು ಹೋದ ಕಡೆಗಳಲ್ಲೆಲ್ಲ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿದ್ದಾರೆ. ಆದರೆ ನಾನು ನನ್ನ ಸ್ವಂತ ಮನೆತನಕ್ಕಾಗಿ ಸಂಪಾದಿಸುವುದು ಯಾವಾಗ?” ಎಂದನು.


“ಸ್ವಾಮೀ, ದಯವಿರಲಿ, ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿ.


ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು.


ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದನು. ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಇವನಿಗೆ ಮದುವೆ ಮಾಡಿಕೊಟ್ಟನು.


ನೀವು ಹೀಗೆ ಮಾಡುವುದಕ್ಕಿಂತಲೂ ನನ್ನನ್ನು ಈ ಕೂಡಲೆ ಕೊಂದುಹಾಕಿದರೆ ಉಪಕಾರವಾದೀತು; ನನಗಾಗುತ್ತಿರುವ ಸಂಕಟವನ್ನು ಸಹಿಸಲಾರೆ,” ಎಂದನು.


ಬಳಿಕ ಶೆಕೆಮನು ಆ ಹುಡುಗಿಯ ತಂದೆ ಮತ್ತು ಸಹೋದರರಿಗೆ , “ನನ್ನ ಮೇಲೆ ನಿಮಗೆ ಕೃಪೆಯಿರಲಿ; ನೀವು ಹೇಳುವಷ್ಟನ್ನು ಕೊಡುತ್ತೇನೆ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ಮತ್ತು ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ, ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ಮರಳಿ ಕಟ್ಟುವುದಕ್ಕೆ ಜುದೇಯ ನಾಡಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು,” ಎಂದು ಹೇಳಿದೆ.


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ತರುವಾಯ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಅಟ್ಟಿ, ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲೇ ಸೇವೆಮಾಡಲಿ,” ಎಂದು ತಿಳಿಸಿದನು.


ಆತ ಸರ್ವೇಶ್ವರನಿಗೆ, “ನಿಮ್ಮ ದಾಸನಾದ ನನಗೇಕೆ ಈ ಜನರನ್ನು ಕರೆದೊಯ್ಯುವ ಭಾರವನ್ನು ಹಾಕಿದಿರಿ?


ಆ ಪಾತ್ರೆಯಿಂದಲೆ ಅಲ್ಲವೆ ನನ್ನ ದಣಿ ಪಾನಮಾಡುವುದು? ಅದರಲ್ಲಿ ನೋಡೇ ಅಲ್ಲವೆ ಶಕುನ ಹೇಳುವುದು? ನೀವು ಮಾಡಿರುವುದು ಮಹಾ ನೀಚತನ, ಎನ್ನಬೇಕು,” ಎಂದು ತಿಳಿಸಿದನು.


ಸರ್ವೇಶ್ವರನ ಮಂಜೂಷ ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಅವಧಿಯಲ್ಲಿ ಸರ್ವೇಶ್ವರ ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು