Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:30 - ಕನ್ನಡ ಸತ್ಯವೇದವು C.L. Bible (BSI)

30 ನಾನು ಬರುವುದಕ್ಕೆ ಮೊದಲು ನಿಮಗಿದ್ದ ಕೆಲವು ಈಗ ಬಹಳವಾಗಿ ಹೆಚ್ಚಿವೆ. ನಾನು ಹೋದ ಕಡೆಗಳಲ್ಲೆಲ್ಲ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿದ್ದಾರೆ. ಆದರೆ ನಾನು ನನ್ನ ಸ್ವಂತ ಮನೆತನಕ್ಕಾಗಿ ಸಂಪಾದಿಸುವುದು ಯಾವಾಗ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನು ಬರುವದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ; ಈಗ ಬಹಳವಾಗಿ ಹೆಚ್ಚಾಯಿತು. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾನು ಬರುವುದಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಯೆಹೋವ ದೇವರು ನಿನ್ನನ್ನು ಆಶೀರ್ವದಿಸಿದ್ದಾರೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:30
7 ತಿಳಿವುಗಳ ಹೋಲಿಕೆ  

ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.


ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.


ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡು ನೀವು ಬಿಟ್ಟುಬಂದ ಈಜಿಪ್ಟ್ ದೇಶದ ಹಾಗಲ್ಲ. ಈಜಿಪ್ಟಿನಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.


ಅದಕ್ಕೆ ಯಕೋಬನು, “ನಾನು ನಿಮಗೆ ಎಷ್ಟು ಸೇವೆ ಮಾಡಿದ್ದೇನೆಂಬುದೂ ನನ್ನ ವಶದಲ್ಲಿದ್ದ ನಿಮ್ಮ ಪಶುಪ್ರಾಣಿಗಳು ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀವೇ ಬಲ್ಲಿರಿ.


ಆಗ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು?” ಎಂದನು. ಯಕೋಬನು, “ನನಗೇನೂ ಕೊಡಬೇಕಾಗಿಲ್ಲ; ಒಂದೇ ಒಂದು ಕಾರ್ಯಕ್ಕೆ ಒಪ್ಪಿಗೆ ನೀಡಿದರೆ, ನಾನು ಮತ್ತೆ ನಿಮ್ಮ ಮಂದೆಯನ್ನು ಮೇಯಿಸಿಕೊಂಡು ಬರುತ್ತೇನೆ;


ಈ ಪ್ರಕಾರ ಯಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ಹಿಂಡುಗಳು ಮಾತ್ರವಲ್ಲ ದಾಸದಾಸಿಯರೂ ಒಂಟೆ ಕತ್ತೆಗಳೂ ಹೇರಳವಾಗಿದ್ದವು.


ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು