ಆದಿಕಾಂಡ 30:32 - ಕನ್ನಡ ಸತ್ಯವೇದವು C.L. Bible (BSI)32 ಅದೇನೆಂದರೆ, ಈ ದಿನ ನಾನು ನಿಮ್ಮ ಮಂದೆಗಳಿಗೆ ಹೋಗಿ ವಿಕಾರ ಬಣ್ಣವುಳ್ಳವುಗಳನ್ನೆಲ್ಲ ಅಂದರೆ, ಕುರಿಮರಿಗಳಲ್ಲಿ ಕಪ್ಪಾಗಿರುವವುಗಳನ್ನೂ ಆಡುಮರಿಗಳಲ್ಲಿ ಚುಕ್ಕೆ ಅಥವಾ ಮಚ್ಚೆವುಳ್ಳವುಗಳನ್ನೂ ವಿಂಗಡಿಸುತ್ತೇನೆ. ಅವೇ ನನ್ನ ಸಂಬಳ ಎಂದು ನೀವು ಭಾವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅದೇನಂದರೆ, ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ ವಿಕಾರವರ್ಣವುಳ್ಳವುಗಳನ್ನೆಲ್ಲಾ ಅಂದರೆ ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ ಆಡುಗಳಲ್ಲಿ ಚುಕ್ಕೆ ಅಥವಾ ಮಚ್ಚೆ ಉಳ್ಳವುಗಳನ್ನೂ ವಿಂಗಡಿಸುವೆನು; [ಮುಂದೆ ಅಂಥಾದ್ದು ಹುಟ್ಟಿದರೆ] ಅದೇ ನನ್ನ ಸಂಬಳವೆಂದು ನೀನು ಭಾವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಾನು ನಿನ್ನ ಕುರಿಮಂದೆಯೊಳಗೆ ಹೋಗಿ, ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಕುರಿಯನ್ನೂ ಪ್ರತಿಯೊಂದು ಕಪ್ಪು ಕುರಿಯನ್ನೂ ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಮೇಕೆಯನ್ನೂ ತೆಗೆದುಕೊಳ್ಳುವೆನು. ಅದೇ ನನಗೆ ಸಂಬಳ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದು ಹೋಗುವೆನು. ಕುರಿಗಳಲ್ಲಿ ಕಂದುಬಣ್ಣದವುಗಳನ್ನೆಲ್ಲಾ, ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ. ಅಧ್ಯಾಯವನ್ನು ನೋಡಿ |