Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:35 - ಕನ್ನಡ ಸತ್ಯವೇದವು C.L. Bible (BSI)

35 ಆದರೆ ಅದೇ ದಿನ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ, ಮಚ್ಚೆ ಇದ್ದವುಗಳನ್ನೂ ಅಂದರೆ, ಸ್ವಲ್ಪ ಬಿಳುಪಾದ ಬಣ್ಣ ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅದೇ ದಿನ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆ ದಿನ ಲಾಬಾನನು ಚುಕ್ಕೆಗಳಿದ್ದ ಎಲ್ಲಾ ಹೋತಗಳನ್ನೂ ಮೇಕೆಗಳನ್ನೂ ಕಪ್ಪಾದ ಕುರಿಗಳನ್ನೂ ಪ್ರತ್ಯೇಕಿಸಿದನು. ಲಾಬಾನನು ತನ್ನ ಗಂಡುಮಕ್ಕಳಿಗೆ ಆ ಕುರಿಗಳನ್ನು ನೋಡಿಕೊಳ್ಳಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಂದು ಬಣ್ಣವಿದ್ದವುಗಳನ್ನೂ ವಿಂಗಡಿಸಿ, ತನ್ನ ಪುತ್ರರ ಕೈಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:35
5 ತಿಳಿವುಗಳ ಹೋಲಿಕೆ  

ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು ತೆಗೆದು ನನಗೆ ಕೊಟ್ಟರು.


ಅದೇನೆಂದರೆ, ಈ ದಿನ ನಾನು ನಿಮ್ಮ ಮಂದೆಗಳಿಗೆ ಹೋಗಿ ವಿಕಾರ ಬಣ್ಣವುಳ್ಳವುಗಳನ್ನೆಲ್ಲ ಅಂದರೆ, ಕುರಿಮರಿಗಳಲ್ಲಿ ಕಪ್ಪಾಗಿರುವವುಗಳನ್ನೂ ಆಡುಮರಿಗಳಲ್ಲಿ ಚುಕ್ಕೆ ಅಥವಾ ಮಚ್ಚೆವುಳ್ಳವುಗಳನ್ನೂ ವಿಂಗಡಿಸುತ್ತೇನೆ. ಅವೇ ನನ್ನ ಸಂಬಳ ಎಂದು ನೀವು ಭಾವಿಸಬೇಕು.


ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ,” ಎಂದನು.


ಅಲ್ಲದೆ, ತನಗೂ ತನ್ನ ಉಳಿದ ಮಂದೆಯನ್ನು ಮೇಯಿಸುತ್ತಿದ್ದ ಯಕೋಬನಿಗೂ ಮಧ್ಯೆ ಮೂರು ದಿನದ ಪ್ರಯಾಣದಷ್ಟು ದೂರದ ಅಂತರವಿರುವಂತೆ ಮಾಡಿಬಿಟ್ಟನು.


'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು