Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:36 - ಕನ್ನಡ ಸತ್ಯವೇದವು C.L. Bible (BSI)

36 ಅಲ್ಲದೆ, ತನಗೂ ತನ್ನ ಉಳಿದ ಮಂದೆಯನ್ನು ಮೇಯಿಸುತ್ತಿದ್ದ ಯಕೋಬನಿಗೂ ಮಧ್ಯೆ ಮೂರು ದಿನದ ಪ್ರಯಾಣದಷ್ಟು ದೂರದ ಅಂತರವಿರುವಂತೆ ಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ತನಗೂ ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ವಿುಕ್ಕಾದವುಗಳನ್ನು ಮೇಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದ್ದರಿಂದ ಅವನ ಗಂಡುಮಕ್ಕಳು ಚುಕ್ಕೆಗಳಿದ್ದ ಅವುಗಳೊಂದಿಗೆ ಮತ್ತೊಂದು ಸ್ಥಳಕ್ಕೆ ಹೋದರು. ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಯಾಕೋಬನು ಅಲ್ಲಿದ್ದುಕೊಂಡು ಉಳಿದವುಗಳನ್ನೆಲ್ಲ ನೋಡಿಕೊಳ್ಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ತನಗೂ, ಯಾಕೋಬನಿಗೂ ಮಧ್ಯದಲ್ಲಿ ಮೂರು ದಿನಗಳ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಯನ್ನು ಮೇಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:36
3 ತಿಳಿವುಗಳ ಹೋಲಿಕೆ  

ಆದರೆ ಅದೇ ದಿನ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ, ಮಚ್ಚೆ ಇದ್ದವುಗಳನ್ನೂ ಅಂದರೆ, ಸ್ವಲ್ಪ ಬಿಳುಪಾದ ಬಣ್ಣ ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಬಿಟ್ಟನು.


ಹೀಗಿರುವಲ್ಲಿ ಯಕೋಬನು ಚಿನಾರು, ಬಾದಾಮಿ, ಆರ್ಮೋನ್ ಎಂಬ ಮರಗಳಿಂದ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟಿಪಟ್ಟಿಯಾಗಿ ತೊಗಟೆಯನ್ನು ಸುಲಿದು ಅವುಗಳಲ್ಲಿ ಇರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿ


ಯಕೋಬನು ಓಡಿಹೋದ ಸುದ್ದಿ ಲಾಬಾನನಿಗೆ ಮೂರನೆಯ ದಿನ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು