Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:4 - ಕನ್ನಡ ಸತ್ಯವೇದವು C.L. Bible (BSI)

4 ಅಂತೆಯೇ ದಾಸಿ ಬಿಲ್ಹಾಳನ್ನು ತನ್ನ ಗಂಡನಿಗೆ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತನ್ನ ದಾಸಿಯಾದ ಬಿಲ್ಹಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಹೆಂಡತಿಯಾಗುವದಕ್ಕೆ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಂತೆಯೇ ರಾಹೇಲಳು ಬಿಲ್ಹಾಳನ್ನು ತನ್ನ ಗಂಡನಾದ ಯಾಕೋಬನಿಗೆ ಕೊಟ್ಟಳು. ಯಾಕೋಬನು ಬಿಲ್ಹಾಳನ್ನು ಕೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗೆ ಅವನಿಗೆ ತನ್ನ ದಾಸಿ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳನ್ನು ಸ್ವೀಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:4
12 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನನ್ನ ಮಾತನ್ನು ಕೇಳು: ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ನಿನ್ನೆದುರಿನಲ್ಲೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲೇ ಅವರ ಕೂಡ ಮಲಗುವನು.


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ, ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ, ಕಡೆಯಲ್ಲಿ ರಾಖೇಲಳನ್ನೂ ಜೋಸೆಫನನ್ನೂ ನಿಲ್ಲಿಸಿದನು.


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ದೂರಕ್ಕೆ ಪೂರ್ವದಿಕ್ಕಿನಲ್ಲಿದ್ದ ಕೆದೆಮ್ ನಾಡಿಗೆ, ಕಳಿಸಿಬಿಟ್ಟನು.


ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.


ಇದೂ ಅಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬುವರನ್ನು ಹೆತ್ತಳು.


ಆಕೆ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಮನೆಯಿಂದ ಕಳುಹಿಸಿಬಿಡಿ. ದಾಸಿಯ ಮಗನು ನನ್ನ ಮಗನೊಂದಿಗೆ ಹಕ್ಕುಬಾಧ್ಯಸ್ಥನಾಗಬಾರದು,” ಎಂದು ಹೇಳಿದಳು.


ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.


ಅವನು ಬಿಲ್ಹಾಳನ್ನು ಕೂಡಲು ಅವಳು ಗರ್ಭಿಣಿಯಾಗಿ ಒಂದು ಗಂಡು ಮಗುವನ್ನು ಹೆತ್ತಳು.


(ಆಕೆಗೆ ಬಿಲ್ಹಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.)


ಇವರು ಲಾಬಾನನು ತನ್ನ ಮಗಳು ರಾಖೇಲಳಿಗೆ ಕೊಟ್ಟ ದಾಸಿ ಬಿಲ್ಹಳ ಸಂತತಿಯವರು. ಈಕೆಯಿಂದ ಯಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಏಳು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು