Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:5 - ಕನ್ನಡ ಸತ್ಯವೇದವು C.L. Bible (BSI)

5 ಅವನು ಬಿಲ್ಹಾಳನ್ನು ಕೂಡಲು ಅವಳು ಗರ್ಭಿಣಿಯಾಗಿ ಒಂದು ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಕೋಬನು ಅವಳನ್ನು ಸಂಗಮಿಸಲು ಬಿಲ್ಹಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಅವಳನ್ನು ಕೂಡಲು ಬಿಲ್ಹಳು ಗರ್ಭಿಣಿಯಾಗಿ ಗಂಡುಮಗುವನ್ನು ಹೆರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಿಲ್ಹಾ ಬಸುರಾಗಿ ಯಾಕೋಬನಿಗೆ ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬಿಲ್ಹಳು ಗರ್ಭಿಣಿಯಾಗಿ, ಯಾಕೋಬನಿಗೆ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:5
11 ತಿಳಿವುಗಳ ಹೋಲಿಕೆ  

ಆಮೇಲೆ ದೇವರು ಅಬ್ರಹಾಮನೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಆ ಒಡಂಬಡಿಕೆಯ ಚಿಹ್ನೆಯನ್ನಾಗಿ ಸುನ್ನತಿಯನ್ನು ವಿಧಿಸಿದರು.ಅದರಂತೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಹುಟ್ಟಿದ ಎಂಟನೆಯ ದಿನ ಸುನ್ನತಿಯನ್ನು ಮಾಡಿದನು. ಇಸಾಕನು ತನ್ನ ಮಗ ಯಕೋಬನಿಗೂ, ಯಕೋಬನು ತನ್ನ ಹನ್ನೆರಡು ಮಕ್ಕಳಾದ ನಮ್ಮ ಪಿತಾಮಹರಿಗೂ ಹಾಗೆಯೇ ಮಾಡಿದನು.


ಅಂತೆಯೇ ದಾಸಿ ಬಿಲ್ಹಾಳನ್ನು ತನ್ನ ಗಂಡನಿಗೆ ಒಪ್ಪಿಸಿದಳು.


ಆಗ ರಾಖೇಲಳು, “ದೇವರು ನನಗೆ ನ್ಯಾಯ ದೊರಕಿಸಿದ್ದಾರೆ, ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾರೆ,” ಎಂದು ಹೇಳಿ ಆ ಮಗುವಿಗೆ ‘ದಾನ್’ ಎಂದು ಹೆಸರಿಟ್ಟಳು.


ದಾನ್, ನಫ್ತಾಲಿ - ಇವರು ರಾಖೇಲಳ ದಾಸಿ ಬಿಲ್ಹಳಲ್ಲಿ ಹುಟ್ಟಿದವರು.


ಇವರು ಲಾಬಾನನು ತನ್ನ ಮಗಳು ರಾಖೇಲಳಿಗೆ ಕೊಟ್ಟ ದಾಸಿ ಬಿಲ್ಹಳ ಸಂತತಿಯವರು. ಈಕೆಯಿಂದ ಯಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಏಳು ಮಂದಿ.


ಅದಕ್ಕೆ ಯಕೋಬನು, “ನಾನು ನಿಮಗೆ ಎಷ್ಟು ಸೇವೆ ಮಾಡಿದ್ದೇನೆಂಬುದೂ ನನ್ನ ವಶದಲ್ಲಿದ್ದ ನಿಮ್ಮ ಪಶುಪ್ರಾಣಿಗಳು ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀವೇ ಬಲ್ಲಿರಿ.


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ನಿಮಗೆ ಸಹಾಯಕರಾಗಿರಬೇಕಾದವರ ಹೆಸರುಗಳು ಇವು: ರೂಬೇನ್ ಕುಲದಿಂದ ಶೆದೇಯೂರನ ಮಗ ಎಲೀಚೂರ್.


ದಾನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 62,700:


ಯಕೋಬನ ಹನ್ನೆರಡು ಜನ ಮಕ್ಕಳು ಇವರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬೂಲೂನ್,


ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು