Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:9 - ಕನ್ನಡ ಸತ್ಯವೇದವು C.L. Bible (BSI)

9 ಲೇಯಳು ತನಗೆ ಹೆರಿಗೆ ನಿಂತುಹೋಗಿ ಇರುವುದನ್ನು ತಿಳಿದು ತನ್ನ ದಾಸಿ ಜಿಲ್ಪಳನ್ನು ಯಕೋಬನಿಗೆ ಹೆಂಡತಿಯಾಗಿ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಲೇಯಳು ತನಗೆ ಹೆರಿಗೆ ನಿಂತುಹೋಗಿರುವದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವದಕ್ಕೆ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಲೇಯಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿ ತನ್ನ ಸೇವಕಿಯಾದ ಜಿಲ್ಪಳನ್ನು ಯಾಕೋಬನಿಗೆ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಲೇಯಳು ತಾನು ಹೆರುವುದು ನಿಂತಿತೆಂದು ತಿಳಿದು, ತನ್ನ ದಾಸಿ ಜಿಲ್ಪಳನ್ನು ಯಾಕೋಬನಿಗೆ ಹೆಂಡತಿಯಾಗಿ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:9
8 ತಿಳಿವುಗಳ ಹೋಲಿಕೆ  

ಅಂತೆಯೇ ದಾಸಿ ಬಿಲ್ಹಾಳನ್ನು ತನ್ನ ಗಂಡನಿಗೆ ಒಪ್ಪಿಸಿದಳು.


ದೇವರು ಲೆಯಳ ಪ್ರಾರ್ಥನೆಯನ್ನು ಕೇಳಿದರು. ಆಕೆ ಗರ್ಭಿಣಿಯಾಗಿ ಯಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.


ಮಗದೊಮ್ಮೆ ಗರ್ಭಧರಿಸಿ ಈ ಸಾರಿಯೂ ಗಂಡು ಮಗುವನ್ನೇ ಹೆತ್ತಳು. "ಈಗ ಸರ್ವೇಶ್ವರಸ್ವಾಮಿಯ ಸ್ತುತಿಮಾಡುತ್ತೇನೆ,“ ಎಂದು ಹೇಳಿ ಆ ಮಗುವಿಗೆ “ಯೆಹೂದ" ಎಂದು ನಾಮಕರಣ ಮಾಡಿದಳು. ಆ ಮೇಲೆ ಆಕೆಗೆ ಗರ್ಭಧಾರಣೆ ಆಗುವುದು ನಿಂತುಹೋಯಿತು.


ಹೀಗೆ ಹತ್ತು ವರ್ಷ ಕಾನಾನ್ ನಾಡಿನಲ್ಲಿ ವಾಸಮಾಡಿದ ಮೇಲೆ ಅಬ್ರಾಮನ ಹೆಂಡತಿ ಸಾರಯಳು ಈಜಿಪ್ಟಿನ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಉಪಪತ್ನಿಯಾಗಿ ಒಪ್ಪಿಸಿದಳು.


ಆಗ ರಾಖೇಲಳು, “ನನ್ನ ಅಕ್ಕನ ಸಂಗಡ ಬಹಳವಾಗಿ ಹೋರಾಡಿ ಗೆದ್ದಿದ್ದೇನೆ,” ಎಂದು ಹೇಳಿ ಆ ಮಗುವನ್ನು ‘ನಫ್ತಾಲಿ’ ಎಂದು ಹೆಸರಿಸಿದಳು.


ದಾಸಿ ಜಿಲ್ಪಳೂ ಯಕೋಬನಿಗೆ ಒಂದು ಗಂಡು ಮಗುವನ್ನು ಹೆತ್ತಳು.


ಲಾಬಾನನು ತನ್ನ ಮಗಳು ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.)


ಇವರು ಲಾಬಾನನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಹದಿನಾರು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು