Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:14 - ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ರಾಖೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ಇನ್ನು ನಮಗೆ ಪಾಲಾಗಲಿ, ಹಕ್ಕುಬಾಧ್ಯತೆಯಾಗಲಿ ಏನಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು - ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಬಾಧ್ಯತೆಯೂ ಇನ್ನೇನದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರಾಹೇಲಳು ಮತ್ತು ಲೇಯಳು ಯಾಕೋಬನಿಗೆ, “ನಮ್ಮ ತಂದೆ ಸಾಯುವಾಗ ನಮಗೆ ಕೊಡಲು ಅವನಲ್ಲಿ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ರಾಹೇಲಳು, ಲೇಯಳು ಅವನಿಗೆ, “ನಮ್ಮ ತಂದೆಯ ಮನೆಯಲ್ಲಿ ಇನ್ನೇನಾದರೂ ಭಾಗವೂ, ಬಾಧ್ಯತೆಯೂ ಇದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:14
6 ತಿಳಿವುಗಳ ಹೋಲಿಕೆ  

ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.


(ಆಕೆಗೆ ಬಿಲ್ಹಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.)


ಲಾಬಾನನು ತನ್ನ ಮಗಳು ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.)


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು.


ಅವರು ನಮ್ಮನ್ನು ಅನ್ಯರೆಂದೇ ಎಣಿಸುತ್ತಾರೆ; ನಮ್ಮನ್ನು ಮಾರಿ, ನಮ್ಮ ಮೂಲಕ ದೊರಕಿದ ಹಣವನ್ನು ಅವರೇ ನುಂಗಿಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು