Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:15 - ಕನ್ನಡ ಸತ್ಯವೇದವು C.L. Bible (BSI)

15 ಅವರು ನಮ್ಮನ್ನು ಅನ್ಯರೆಂದೇ ಎಣಿಸುತ್ತಾರೆ; ನಮ್ಮನ್ನು ಮಾರಿ, ನಮ್ಮ ಮೂಲಕ ದೊರಕಿದ ಹಣವನ್ನು ಅವರೇ ನುಂಗಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ದ್ರವ್ಯವನ್ನು ತಾನೇ ನುಂಗಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ನಮ್ಮನ್ನು ಅನ್ಯರಂತೆ ಕಂಡನು; ಅವನು ನಮ್ಮನ್ನು ನಿನಗೆ ಮಾರಿದ್ದಾನೆ; ನಮ್ಮ ಐಶ್ವರ್ಯವನ್ನೆಲ್ಲ ಅವನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ನಮ್ಮನ್ನು ಹೊರಗಿನವರಂತೆ ಎಣಿಸಿದ್ದಾನಲ್ಲಾ. ಅವನು ನಮ್ಮನ್ನು ಮಾರಿ, ನಮ್ಮ ಹಣವನ್ನೂ ನುಂಗೇ ಬಿಟ್ಟನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:15
9 ತಿಳಿವುಗಳ ಹೋಲಿಕೆ  

“ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.


ಇಂಥ ಪರಿಸ್ಥಿತಿಯಲ್ಲೂ ಇಪ್ಪತ್ತು ವರ್ಷ ನಿಮ್ಮ ಮನೆಯಲ್ಲಿದ್ದು ನಿಮ್ಮಿಬ್ಬರ ಹೆಣ್ಣು ಮಕ್ಕಳಿಗಾಗಿ ಹದಿನಾಲ್ಕು ವರ್ಷ ಹಾಗೂ ನಿಮ್ಮ ಆಡುಕುರಿಗಳಿಗಾಗಿ ಆರು ವರ್ಷ ದುಡಿದಿದ್ದೇನೆ. ಹೀಗಿದ್ದರೂ ಹತ್ತು ಸಾರಿ ನೀವು ನನ್ನ ಸಂಬಳವನ್ನು ಬದಲಾಯಿಸಿದಿರಿ.


ನಾನು ದುಡಿದು ಪಡೆದ ಹೆಂಡತಿಯರನ್ನೂ ಮಕ್ಕಳನ್ನೂ ಕಳಿಸಿಕೊಡಿ, ನಾನು ಹೊರಡುತ್ತೇನೆ. ನಿಮಗೆ ನಾನು ಮಾಡಿದ ಸೇವೆ ಎಷ್ಟೆಂದು ನಿಮಗೇ ತಿಳಿದಿದೆ,” ಎಂದು ಹೇಳಿದನು.


ರಾತ್ರಿಯಾದಾಗ ತನ್ನ ಹಿರಿಯ ಮಗಳು ಲೇಯಳನ್ನೇ ಯಕೋಬನ ಬಳಿಗೆ ಕರೆತಂದನು. ಯಕೋಬನು ಆಕೆಯನ್ನು ಕೂಡಿದನು. (


ಅದಕ್ಕೆ ರಾಖೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ಇನ್ನು ನಮಗೆ ಪಾಲಾಗಲಿ, ಹಕ್ಕುಬಾಧ್ಯತೆಯಾಗಲಿ ಏನಿದೆ?


ದೇವರು ನಮ್ಮ ತಂದೆಯಿಂದ ಕಿತ್ತುಕೊಂಡ ಈ ಆಸ್ತಿಯೆಲ್ಲ ನಮ್ಮದಾಗಿದೆ, ನಮ್ಮ ಮಕ್ಕಳದಾಗಿದೆ. ಆದುದರಿಂದ ದೇವರು ನಿಮಗೆ ಹೇಳದಂತೆಯೇ ಮಾಡಿ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು