Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:25 - ಕನ್ನಡ ಸತ್ಯವೇದವು C.L. Bible (BSI)

25 ಲಾಬಾನನು, ಯಕೋಬನನ್ನು ಎದುರುಗೊಂಡಾಗ ಯಕೋಬನು ಬೆಟ್ಟದಲ್ಲಿ ಗುಡಾರವನ್ನು ಹಾಕಿಸಿಕೊಂಡಿದ್ದನು. ಲಾಬಾನನು ಕೂಡ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಲಾಬಾನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಸಿದನು. ಲಾಬಾನನೂ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮರುದಿನ ಮುಂಜಾನೆ ಲಾಬಾನನು ಯಾಕೋಬನನ್ನು ಸಂಧಿಸಿದನು. ಯಾಕೋಬನು ಬೆಟ್ಟದ ಮೇಲೆ ಪಾಳೆಯ ಮಾಡಿಕೊಂಡಿದ್ದನು. ಆದ್ದರಿಂದ ಲಾಬಾನನು ಮತ್ತು ಅವನ ಜನರೆಲ್ಲರು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ತರುವಾಯ ಲಾಬಾನನು ಯಾಕೋಬನನ್ನು ಸಂಧಿಸಿದಾಗ, ಯಾಕೋಬನು ಗಿಲ್ಯಾದ್ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ಅಲ್ಲಿಯೇ ಗುಡಾರವನ್ನು ಹಾಕಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:25
5 ತಿಳಿವುಗಳ ಹೋಲಿಕೆ  

ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದು ಕಾನಾನ್ ನಾಡಿನ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಪಟ್ಟಣದ ಮುಂದೆಯೇ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.


ಲಾಬಾನನು ಯಕೋಬನಿಗೆ, “ನೀನು ಹೀಗೆ ಮಾಡಬಹುದೆ? ನನ್ನ ಹೆಣ್ಣು ಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದ ಕೈದಿಗಳಂತೆ ಎಳೆದುಕೊಂಡು ಓಡಿಬಂದಿರುವೆಯಲ್ಲಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು