Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:27 - ಕನ್ನಡ ಸತ್ಯವೇದವು C.L. Bible (BSI)

27 ನನಗೆ ಏನೂ ಹೇಳದೆ ವಂಚಿಸಿ ಏಕೆ ಓಡಿಬಂದೆ? ನನಗೆ ತಿಳಿಸಿದ್ದರೆ ಸಂಗೀತ ಸಂಭ್ರಮದೊಂದಿಗೆ, ತಾಳಮೇಳ ವಾದ್ಯಗಳೊಂದಿಗೆ ನಿನ್ನನ್ನು ಸಾಗಕಳುಹಿಸುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಬಂದಿ? ನನಗೆ ತಿಳಿಸಿದ್ದರೆ ನಾನು ಸಂಗೀತಮಾಡಿಸಿ ಮದ್ದಳೆ, ವೀಣೆ ಮುಂತಾದ ವಾದ್ಯಗಳೊಡನೆ ಸಂತೋಷದಿಂದ ನಿನ್ನನ್ನು ಸಾಗಕಳುಹಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀನು ನನಗೆ ಹೇಳದೆ ಓಡಿಬಂದದ್ದೇಕೆ? ನೀನು ನನ್ನನ್ನು ಕೇಳಿದ್ದರೆ ನಾನು ನಿನಗಾಗಿ ಒಂದು ಔತಣಕೂಟವನ್ನೇರ್ಪಡಿಸುತ್ತಿದ್ದೆ. ಅಲ್ಲಿ ಗಾಯನ, ನೃತ್ಯ ಮತ್ತು ವಾದ್ಯಗೋಷ್ಠಿಗಳಿರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಹೋದೆ? ಏಕೆ ಮೋಸಮಾಡಿದೆ? ನನಗೆ ತಿಳಿಸಿದ್ದರೆ ಸಂತೋಷದಿಂದ ಹಾಡು, ತಾಳ, ವೀಣೆಗಳ ಸಂಗೀತದೊಂದಿಗೆ ನಿನ್ನನ್ನು ಕಳುಹಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:27
11 ತಿಳಿವುಗಳ ಹೋಲಿಕೆ  

ಆರೋನನ ಅಕ್ಕ ಮಿರ್ಯಾಮಳು ಒಬ್ಬ ಪ್ರವಾದಿನಿ. ಆಕೆ ತಮ್ಮಟೆಯನ್ನು ಕೈಗೆ ತೆಗೆದುಕೊಂಡಳು. ಮಹಿಳೆಯರೆಲ್ಲರು ತಮ್ಮಟೆ ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೊರಟರು.


ಅಂತೆಯೇ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಸರ್ವೇಶ್ವರನು ಹೇಳಿದ ಹಾಗೆ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.


ಅದಕ್ಕೆ ಪ್ರತ್ಯುತ್ತರವಾಗಿ ಯಕೋಬನು, “ನೀವು ನಿಮ್ಮ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಕಿತ್ತುಕೊಳ್ಳುವಿರಿ ಎಂದು ಭಯಪಟ್ಟು ಹೀಗೆ ಹೊರಟು ಬಂದೆ.


ಇವನ ತಮ್ಮನ ಹೆಸರು ಯೂಬಾಲ, ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರಿಗೆ ಮೂಲಪುರುಷ.


ಲಾಬಾನನು ಯಕೋಬನಿಗೆ, “ನೀನು ಹೀಗೆ ಮಾಡಬಹುದೆ? ನನ್ನ ಹೆಣ್ಣು ಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದ ಕೈದಿಗಳಂತೆ ಎಳೆದುಕೊಂಡು ಓಡಿಬಂದಿರುವೆಯಲ್ಲಾ;


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು