Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:41 - ಕನ್ನಡ ಸತ್ಯವೇದವು C.L. Bible (BSI)

41 ಇಂಥ ಪರಿಸ್ಥಿತಿಯಲ್ಲೂ ಇಪ್ಪತ್ತು ವರ್ಷ ನಿಮ್ಮ ಮನೆಯಲ್ಲಿದ್ದು ನಿಮ್ಮಿಬ್ಬರ ಹೆಣ್ಣು ಮಕ್ಕಳಿಗಾಗಿ ಹದಿನಾಲ್ಕು ವರ್ಷ ಹಾಗೂ ನಿಮ್ಮ ಆಡುಕುರಿಗಳಿಗಾಗಿ ಆರು ವರ್ಷ ದುಡಿದಿದ್ದೇನೆ. ಹೀಗಿದ್ದರೂ ಹತ್ತು ಸಾರಿ ನೀವು ನನ್ನ ಸಂಬಳವನ್ನು ಬದಲಾಯಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಇಪ್ಪತ್ತು ವರುಷ ನಿನ್ನ ಮನೆಯಲ್ಲಿದ್ದೆನು; ನಿನ್ನಿಬ್ಬರ ಹೆಣ್ಣುಮಕ್ಕಳಿಗಾಗಿ ಹದಿನಾಲ್ಕು ವರುಷವೂ ನಿನ್ನ ಆಡುಕುರಿಗಳಿಗಾಗಿ ಆರು ವರುಷವೂ ಸೇವೆ ಮಾಡಿದೆನು. ನೀನು ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಿನ್ನ ಇಬ್ಬರು ಪುತ್ರಿಯರಿಗಾಗಿ ಹದಿನಾಲ್ಕು ವರ್ಷ, ನಿನ್ನ ಮಂದೆಗಳಿಗೋಸ್ಕರ ಆರು ವರ್ಷ, ಈ ಪ್ರಕಾರ ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದು, ನಿನ್ನ ಸೇವೆ ಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:41
12 ತಿಳಿವುಗಳ ಹೋಲಿಕೆ  

ನಿಮ್ಮ ತಂದೆಯಾದರೋ ನನಗೆ ಮೋಸಮಾಡಿ ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದ್ದಾರೆ. ಅವರಿಂದ ನನಗೆ ಕೇಡಾಗದಂತೆ ದೇವರೇ ನೋಡಿಕೊಂಡರು.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಇದಕ್ಕಾಗಿಯೇ ನಾನು ಇಪ್ಪತ್ತು ವರ್ಷ ನಿಮ್ಮ ಬಳಿ ಇದ್ದುದು? ನಿಮ್ಮ ಆಡುಕುರಿಗಳು ಕಂದು ಹಾಕಲಿಲ್ಲ; ನಿಮ್ಮ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ;


ಕೆಲವು ಕಾಲ, ಅಂದರೆ ನಿನ್ನಣ್ಣನ ಕೋಪ ಶಮನ ಆಗುವವರೆಗೂ, ಅವನ ಬಳಿಯಲ್ಲೇ ಇರು.


ಆ ಬಳಿಕ ಲಾಬಾನನು ಯಕೋಬನಿಗೆ, “ನೀನು ನನ್ನ ಸಂಬಂಧಿಯೆಂದ ಮಾತ್ರಕ್ಕೆ ಬಿಟ್ಟಿ ಸೇವೆ ಮಾಡಿಸಿಕೊಳ್ಳುವುದು ಸರಿಯಲ್ಲ; ನಿನ್ನ ಕೆಲಸಕ್ಕೆ ಏನು ಸಂಬಳ ಕೊಡಲಿ, ಹೇಳು?” ಎಂದು ಕೇಳಿದನು.


ನಿನಗೆ ಏನು ಕೂಲಿ ಕೊಡಬೇಕು ಹೇಳು, ಕೊಡುತ್ತೇನೆ,” ಎಂದು ಉತ್ತರಕೊಟ್ಟನು.


ಹಗಲಿನ ಬೇಗೆಯಿಂದಲೂ ಇರುಳಿನ ಚಳಿಯಿಂದಲೂ ಕರಗಿಹೋಗಿದ್ದೆ; ಕಣ್ಣುಗಳಿಗೆ ನಿದ್ರೆ ದೂರವಾಗಿತ್ತು.


ಕಳುಹಿಸುವಾಗ ಅವರಿಗೆ, “ನೀವು ನನ್ನೊಡೆಯ ಏಸಾವನ ಬಳಿಗೆ ಹೋಗಿ ಈ ಸಮಾಚಾರವನ್ನು ಕೊಡಿ: ‘ನಿಮ್ಮ ದಾಸ ಯಕೋಬನಾದ ನಾನು ಇಷ್ಟು ದಿನ ಲಾಬಾನನ ಬಳಿ ವಾಸಮಾಡಬೇಕಾಗಿ ಬಂದಿತು.


ನಿಮಗೆ ತಿಳಿದಿರುವಂತೆ ನಾನು ನಿಮ್ಮ ತಂದೆಗೆ ಶಕ್ತಿಮೀರಿ ಸೇವೆಸಲ್ಲಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು