Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:42 - ಕನ್ನಡ ಸತ್ಯವೇದವು C.L. Bible (BSI)

42 ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:42
22 ತಿಳಿವುಗಳ ಹೋಲಿಕೆ  

ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II


ನಿಮಗೆ ಹಾನಿಮಾಡುವ ಸಾಮರ್ಥ್ಯ ನನಗಿದೆ. ಆದರೆ ಕಳೆದ ರಾತ್ರಿ ನಿಮ್ಮ ತಂದೆಯ ದೇವರು, “ಯಕೋಬನಿಗೆ ಯಾವ ಬೆದರಿಕೆಯನ್ನೂ ಹಾಕಬೇಡ, ಎಚ್ಚರಿಕೆ!” ಎಂದು ತಿಳಿಸಿದರು.


ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. “ಸರ್ವೇಶ್ವರ ನನ್ನ ದೀನ ಸ್ಥಿತಿಯನ್ನು ನೋಡಿದ್ದಾರೆ, ಇನ್ನು ಮುಂದೆ ಗಂಡ ನನ್ನನ್ನು ಪ್ರೀತಿಸುತ್ತಾನೆ,” ಎಂದುಕೊಂಡು ಆ ಮಗುವಿಗೆ ‘ರೂಬೇನ್’ ಎಂದು ಹೆಸರಿಟ್ಟಳು.


ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು.


ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.


ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.


ದಾವೀದನು ಅವರನ್ನು ಎದುರುಗೊಂಡು “ಸ್ನೇಹಿತರಂತೆ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮಗೆ ಇಲ್ಲಿ ಸ್ವಾಗತ. ನಮ್ಮೊಂದಿಗೆ ಸೇರಿಕೊಳ್ಳಿ, ನಾನು ನಿಮಗೆ ಯಾವ ತೊಂದರೆಯನ್ನು ಕೊಟ್ಟಿಲ್ಲ. ಆದರೆ ನೀವು ನನ್ನನ್ನು ನನ್ನ ವೈರಿಗಳಿಗೆ ಹಿಡಿದುಕೊಡಲು ಬಂದಿದ್ದರೆ ನಮ್ಮ ಪಿತೃಗಳ ದೇವರು ಅದನ್ನು ಬಲ್ಲವರಾಗಿದ್ದು ನಿಮ್ಮನ್ನು ದಂಡಿಸುವರು,” ಎಂದು ಹೇಳಿದನು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಆತ ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ. ಆದುದರಿಂದಲೇ ಮೇಕೆಗಳ ಮೇಲೆ ಹಾರುವ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿವೆ, ಕಣ್ಣೆತ್ತಿನೋಡು.


ಅಲ್ಲಿ ಅವರಿಗೆ, “ನನ್ನ ವಿಷಯದಲ್ಲಿ ನಿಮ್ಮ ತಂದೆಯ ಮನೋಭಾವ ಮೊದಲಿದ್ದಂತೆ ಇಲ್ಲವೆಂದು ಕಂಡುಬಂದಿದೆ. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾರೆ.


ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.


ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.


ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.


ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು.


ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


ಯಕೋಬನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷೆಬಕ್ಕೆ ಬಂದನು. ಅಲ್ಲಿ ತನ್ನ ತಂದೆ ಇಸಾಕನ ದೇವರಿಗೆ ಬಲಿದಾನಗಳನ್ನು ಅರ್ಪಿಸಿದನು.


ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.


ಬಿಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು