Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:44 - ಕನ್ನಡ ಸತ್ಯವೇದವು C.L. Bible (BSI)

44 ಬಾ, ನಾನೂ ನೀನೂ ಒಂದು ಒಪ್ಪಂದ ಮಾಡಿಕೊಳ್ಳೋಣ; ಅದು ನನಗೂ ನಿನಗೂ ಸಾಕ್ಷಿಯಾಗಿರಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ; ಅದಕ್ಕೆ ಒಂದು ಸಾಕ್ಷಿಯಿರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆದ್ದರಿಂದ ನಿನ್ನೊಡನೆ ಒಂದು ಒಪ್ಪಂದ ಮಾಡಿಕೊಳ್ಳಲು ಸಿದ್ಧನಾಗಿದ್ದೇನೆ. ನಮ್ಮ ಒಪ್ಪಂದಕ್ಕೆ ಸಾಕ್ಷಿಯಾಗಿ ಕಲ್ಲುಗಳ ಒಂದು ಕುಪ್ಪೆಯನ್ನು ಮಾಡೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆದ್ದರಿಂದ ನೀನು ಇಲ್ಲಿ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:44
11 ತಿಳಿವುಗಳ ಹೋಲಿಕೆ  

ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.


“ಆದಕಾರಣ ನೀನು ಈ ಗೀತೆಯನ್ನು ಬರೆದು ಇಸ್ರಯೇಲರಿಗೆ ಕಲಿಸಿಕೊಡು; ಈ ಗೀತೆ ಇಸ್ರಯೇಲರಿಗೆ ವಿರೋಧವಾದ, ನನಗೆ ಪರವಾದ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠ ಮಾಡಿಸು.


ಕೇಡು ಮಾಡುವ ಉದ್ದೇಶದಿಂದ ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು. ಹಾಗೆಯೇ ನೀನು ಈ ಕುಪ್ಪೆಯನ್ನಾಗಲಿ ಸ್ತಂಭವನ್ನಾಗಲಿ ದಾಟಿ ನನ್ನ ಬಳಿಗೆ ಬರಕೂಡದು, ಇದಕ್ಕೆ ಈ ಕುಪ್ಪೆ ಹಾಗೂ ಈ ಸ್ತಂಭವೇ ಸಾಕ್ಷಿ.


ಲಾಬಾನನು ಯಕೋಬನಿಗೆ, “ಈ ದಿನ ನಿನಗೂ ನನಗೂ ಆದ ಒಪ್ಪಂದಕ್ಕೆ ಈ ಕುಪ್ಪೆಯೇ ಸಾಕ್ಷಿ” ಎಂದು ಹೇಳಿದ ಕಾರಣ ಅದಕ್ಕೆ ‘ಗೆಲೇದ್’ ಎಂದು ಹೆಸರಾಯಿತು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು