Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:5 - ಕನ್ನಡ ಸತ್ಯವೇದವು C.L. Bible (BSI)

5 ಅಲ್ಲಿ ಅವರಿಗೆ, “ನನ್ನ ವಿಷಯದಲ್ಲಿ ನಿಮ್ಮ ತಂದೆಯ ಮನೋಭಾವ ಮೊದಲಿದ್ದಂತೆ ಇಲ್ಲವೆಂದು ಕಂಡುಬಂದಿದೆ. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರಿಗೆ ಹೇಳಿದ್ದೇನಂದರೆ - ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಕೋಬನು, ರಾಹೇಲಳಿಗೆ ಮತ್ತು ಲೇಯಾಳಿಗೆ, “ನಿಮ್ಮ ತಂದೆ ನನ್ನ ಮೇಲೆ ಕೋಪದಿಂದಿರುವುದನ್ನು ನಾನು ಗಮನಿಸಿದ್ದೇನೆ. ಮೊದಲು ಅವನು ನನ್ನೊಂದಿಗೆ ಸ್ನೇಹದಿಂದಿದ್ದನು. ಆದರೆ ಈಗ ಅವನು ಸ್ನೇಹದಿಂದಿಲ್ಲ. ಆದರೆ ನನ್ನ ತಂದೆಯ ದೇವರು ನನ್ನೊಂದಿಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರಿಗೆ, “ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದ ಹಾಗೆ ಈಗ ಇಲ್ಲದಿರುವುದನ್ನು ನಾನು ನೋಡಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಕಡೆಗೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:5
15 ತಿಳಿವುಗಳ ಹೋಲಿಕೆ  

ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,


ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


‘ನೀವು ಜೋಸೆಫನಿಗೆ - ನಿನ್ನ ಅಣ್ಣಂದಿರಾದ ನಾವು ನಿನಗೆ ಹಾನಿಮಾಡಿದ್ದೇನೋ ನಿಜ; ಆದರೂ ನಮ್ಮ ಅಪರಾಧವನ್ನು, ಪಾಪವನ್ನು ಕ್ಷಮಿಸು - ಎಂದು ಕೇಳಿಕೊಳ್ಳಬೇಕು, ಅವರು ಹೀಗೆ ವಿಧಿಸಿದ್ದರಿಂದ ನಾವು ಮಾಡಿದ ಅಪರಾಧವನ್ನು ಈಗ ನೀನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತಿದ್ದೇವೆ.” ಈ ಮಾತುಗಳನ್ನು ಕೇಳಿ ಜೋಸೆಫನು ಕಣ್ಣೀರು ಸುರಿಸಿದನು.


ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು.


ಆ ದಿನಗಳಲ್ಲಿ ಅಬೀಮೆಲೆಕನು ತನ್ನ ಸೇನಾಪತಿಯಾದ ಫೀಕೋಲನ ಸಮೇತ ಅಬ್ರಹಾಮನ ಬಳಿಗೆ ಬಂದು, “ನೀನು ಮಾಡುವ ಕೆಲಸಕಾರ್ಯಗಳಲ್ಲೆಲ್ಲಾ ದೇವರು ನಿನ್ನ ಸಂಗಡ ಇದ್ದಾರೆ.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ಆದುದರಿಂದ ಯಕೋಬನು ರಾಖೇಲಳನ್ನು ಮತ್ತು ಲೇಯಳನ್ನು ತಾನು ಆಡುಕುರಿ ಮೇಯಿಸುತ್ತಿದ್ದ ಅಡವಿಗೆ ಕರೆಸಿದನು.


ನಿಮಗೆ ಹಾನಿಮಾಡುವ ಸಾಮರ್ಥ್ಯ ನನಗಿದೆ. ಆದರೆ ಕಳೆದ ರಾತ್ರಿ ನಿಮ್ಮ ತಂದೆಯ ದೇವರು, “ಯಕೋಬನಿಗೆ ಯಾವ ಬೆದರಿಕೆಯನ್ನೂ ಹಾಕಬೇಡ, ಎಚ್ಚರಿಕೆ!” ಎಂದು ತಿಳಿಸಿದರು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು