Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:50 - ಕನ್ನಡ ಸತ್ಯವೇದವು C.L. Bible (BSI)

50 ಲಾಬಾನನು ಮುಂದುವರೆದು, “ನೀನು ನನ್ನ ಹೆಣ್ಣು ಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಹೆಣ್ಣುಗಳನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ನಮ್ಮಲ್ಲಿ ಯಾರು ಇಲ್ಲದಿದ್ದರೂ ದೇವರೇ ನಮ್ಮ ಒಪ್ಪಂದಕ್ಕೆ ಸಾಕ್ಷಿಯೆಂಬುದನ್ನು ಮರೆಯಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಮತ್ತು ಲಾಬಾನನು - ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಆಮೇಲೆ ಲಾಬಾನನು “ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ, ದೇವರು ನಿನ್ನನ್ನು ದಂಡಿಸುವನು ಎಂಬುದನ್ನು ನೆನಪು ಮಾಡಿಕೊ. ನೀನು ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ, ದೇವರು ನಿನ್ನನ್ನು ನೋಡುತ್ತಿದ್ದಾನೆ ಎಂಬುದನ್ನು ನೆನಪು ಮಾಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ನೀನು ನನ್ನ ಪುತ್ರಿಯರನ್ನು ಉಪದ್ರವಪಡಿಸಿದರೆ, ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ಪಡೆದರೆ, ಯಾವ ಮನುಷ್ಯನೂ ವಿಚಾರಿಸಲು ಇಲ್ಲದಿದ್ದರೂ ನನಗೂ ನಿನಗೂ ನಡುವೆ ದೇವರೇ ಈ ಒಪ್ಪಂದಕ್ಕೆ ಸಾಕ್ಷಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:50
12 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ.


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


ಅವರು ಅವನಿಗೆ, “ಹಾಗೆಯೇ ಮಾಡುತ್ತೇವೆ; ಉಭಯತ್ರರ ಮಾತುಗಳಿಗೆ ಸರ್ವೇಶ್ವರನೇ ಸಾಕ್ಷಿ,” ಎಂದು ಉತ್ತರಕೊಟ್ಟರು.


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.


ಸಮುವೇಲನು ಪುನಃ, “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬುದಕ್ಕೆ ಸರ್ವೇಶ್ವರ ಹಾಗು ಅವರ ಅಭಿಷಿಕ್ತನು ಸಾಕ್ಷಿಯಾಗಿದ್ದಾರೆ,” ಎಂದನು. ಅವರು, “ಹೌದು, ಸರ್ವೇಶ್ವರ ಸಾಕ್ಷಿ ಆಗಿದ್ದಾರೆ,” ಎಂದು ನುಡಿದರು.


“ಹೆಂಡತಿ ಜೀವದಿಂದಿರುವಾಗಲೆ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನುಂಟು ಮಾಡಬಾರದು.


ಅವನು ಮತ್ತೆ ಯಕೋಬನಿಗೆ, "ಇಗೋ, ನೋಡು ನನಗೂ ನಿನಗೂ ನಡುವೆ ನಿಂತಿರುವ ಕುಪ್ಪೆ ಮತ್ತು ಸ್ಮಾರಕಸ್ತಂಭ.


ಇಗೋ, ನನ್ನ ಕಡೆಯ ಸಾಕ್ಷಿ ಸ್ವರ್ಗದಲ್ಲಿರುವನು ನನ್ನ ಪರವಾದಿ ಮೇಲಣ ಲೋಕದಲ್ಲಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು