Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:53 - ಕನ್ನಡ ಸತ್ಯವೇದವು C.L. Bible (BSI)

53 ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಅಬ್ರಹಾಮ ನಾಹೋರರ ದೇವರು ಅಂದರೆ ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದನು. ಅದೇ ಮೇರೆಗೆ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ನಾವು ಈ ಒಪ್ಪಂದವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಯಾದವನಿಗೆ ಅಬ್ರಹಾಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು. ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:53
20 ತಿಳಿವುಗಳ ಹೋಲಿಕೆ  

ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.


ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗು ತನಗೆ ಸೊಸಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಪಟ್ಟಣವನ್ನು ಬಿಟ್ಟು ಕಾನಾನ್ ನಾಡಿಗೆ ತೆರಳಿದನು. ಅವರು ಹಾರಾನ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ವಾಸಮಾಡಿಕೊಂಡರು.


ಕೇಡು ಮಾಡುವ ಉದ್ದೇಶದಿಂದ ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು. ಹಾಗೆಯೇ ನೀನು ಈ ಕುಪ್ಪೆಯನ್ನಾಗಲಿ ಸ್ತಂಭವನ್ನಾಗಲಿ ದಾಟಿ ನನ್ನ ಬಳಿಗೆ ಬರಕೂಡದು, ಇದಕ್ಕೆ ಈ ಕುಪ್ಪೆ ಹಾಗೂ ಈ ಸ್ತಂಭವೇ ಸಾಕ್ಷಿ.


ಆಗ ಯಕೋಬನು ಆ ಹಾಸಿಗೆಯ ತಲೆಭಾಗದ ಕಡೆ ಬಾಗಿ ಸ್ತೋತ್ರ ಮಾಡಿದನು.


ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.


ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕರಾದ ಸರ್ವೇಶ್ವರಸ್ವಾಮಿಯೇ ಈ ಹೊತ್ತು ಇಸ್ರಯೇಲರಿಗೂ ಅಮ್ಮೋನಿಯರಿಗೂ ಮಧ್ಯೆ ನ್ಯಾಯ ತೀರಿಸಲಿ,” ಎಂದು ಹೇಳಿಸಿದನು.


ನಮ್ಮಿಬ್ಬರ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ನಿತ್ಯಸಾಕ್ಷಿಯಾಗಿರುವರು,” ಎಂದನು.


ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು