Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:12 - ಕನ್ನಡ ಸತ್ಯವೇದವು C.L. Bible (BSI)

12 ನಿನಗೆ ಒಳ್ಳೆಯದನ್ನೇ ಮಾಡಿ ನಿನ್ನ ಸಂತತಿಯನ್ನು ಎಣಿಸಲಾಗದ ಕಡಲತೀರದ ಮರಳಿನಂತೆ ಹೆಚ್ಚಿಸುವೆನು, ಎಂದು ಹೇಳಿದವರು ನೀವೇ ಅಲ್ಲವೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನಗೆ ಒಳ್ಳೇದನ್ನು ಮಾಡಿ ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ‘ನಾನು ನಿನಗೆ ಒಳ್ಳೆಯದನ್ನು ಮಾಡುವೆ. ನಾನು ನಿನ್ನ ಕುಟುಂಬವನ್ನು ಹೆಚ್ಚಿಸಿ ನಿನ್ನ ಮಕ್ಕಳನ್ನು ಸಮುದ್ರದ ಮರಳಿನಷ್ಟು ವೃದ್ಧಿಗೊಳಿಸುವೆನು. ಅವರು ಲೆಕ್ಕಿಸಲಾಗದಷ್ಟು ಅಸಂಖ್ಯಾತವಾಗಿರುವರು’ ಎಂದು ನೀನು ನನಗೆ ವಾಗ್ದಾನ ಮಾಡಿದಿಯಲ್ಲವೇ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:12
14 ತಿಳಿವುಗಳ ಹೋಲಿಕೆ  

ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.


ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.


ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು.


ಹೀಗೆ ಮೃತಪ್ರಾಯನಾಗಿದ್ದ ಒಬ್ಬ ವ್ಯಕ್ತಿ ಆಕಾಶದ ನಕ್ಷತ್ರಗಳಂತೆಯೂ ಕಡಲ ತೀರದ ಮರಳಿನಂತೆಯೂ ಅಸಂಖ್ಯಾತವಾದ ಸಂತತಿಗೆ ತಂದೆಯಾದನು.


ಇಸ್ರಯೇಲ್ ಹಾಗು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾದರು; ಅನ್ನ ಪಾನಗಳಲ್ಲಿ ಸಂತೃಪ್ತರಾಗಿ ಸಂತೋಷದಿಂದ ಬಾಳುತ್ತಿದ್ದರು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು