Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:16 - ಕನ್ನಡ ಸತ್ಯವೇದವು C.L. Bible (BSI)

16 ಇವುಗಳನ್ನು ಹಿಂಡುಹಿಂಡಾಗಿ ವಿಂಗಡಿಸಿ ತನ್ನ ಆಳುಗಳ ವಶಕ್ಕೆ ಒಪ್ಪಿಸಿದನು. “ನೀವು ನನಗಿಂತ ಮುಂಚಿತವಾಗಿ ಹೋಗಿರಿ; ಹಿಂಡು ಹಿಂಡಿಗೂ ಮಧ್ಯೆ ಸ್ಥಳವಿರಲಿ,” ಎಂದು ಆ ಆಳುಗಳಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವುಗಳ ಪ್ರತಿಯೊಂದು ಹಿಂಡನ್ನು ತನ್ನ ಸೇವಕರ ವಶಕ್ಕೆ ಒಪ್ಪಿಸಿ - ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿಹೋಗಿರಿ, ಮತ್ತು ಹಿಂಡು ಹಿಂಡಿಗೆ ಬಿಡುವು ಇರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೋಬನು ಪಶುಗಳ ಪ್ರತಿಯೊಂದು ಮಂದೆಯನ್ನೂ ತನ್ನ ಸೇವಕರ ವಶಕ್ಕೆ ಕೊಟ್ಟನು. ಆಮೇಲೆ ಯಾಕೋಬನು ಸೇವಕರಿಗೆ, “ಪಶುಗಳ ಪ್ರತಿಯೊಂದು ಗುಂಪನ್ನು ವಿಂಗಡಿಸಿ ನನ್ನ ಮುಂದೆ ಹೋಗಿರಿ; ಅಲ್ಲದೆ ಪ್ರತಿಯೊಂದು ಮಂದೆಯ ನಡುವೆಯೂ ಸ್ವಲ್ಪ ಅಂತರವಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನೂ, ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ, ಅವರಿಗೆ, “ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳ ಬಿಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:16
9 ತಿಳಿವುಗಳ ಹೋಲಿಕೆ  

“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.


ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.


ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II


‘ನಿಮ್ಮ ದಾಸ ಯಕೋಬನು ನಮ್ಮ ಹಿಂದೆ ಬರುತ್ತಿದ್ದಾರೆ,’ ಎನ್ನಿರಿ” ಎಂದು ಆಜ್ಞಾಪಿಸಿದನು. ಯಕೋಬನು ತನ್ನೊಳಗೆ, “ನನಗೆ ಮುಂಚಿತವಾಗಿ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ನಾನು ಅವನನ್ನು ಭೇಟಿ ಆಗುತ್ತೇನೆ. ಆಗ ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು,” ಎಂದುಕೊಂಡನು.


ಮೊದಲನೆಯ ಹಿಂಡಿನ ಆಳಿಗೆ, “ನನ್ನ ಅಣ್ಣ ಏಸಾವನು ನಿನ್ನೆದುರಿಗೆ ಬಂದು, “ನೀನು ಯಾರ ಆಳು? ಎಲ್ಲಿಗೆ ಹೋಗುತ್ತಿರುವೆ? ನಿನ್ನ ಮುಂದೆ ಇರುವ ಇವೆಲ್ಲ ಯಾರವು?” ಎಂದು ಕೇಳಿದರೆ ನೀನು,


ಅನಂತರ ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ,” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು