Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:22 - ಕನ್ನಡ ಸತ್ಯವೇದವು C.L. Bible (BSI)

22 ಆ ರಾತ್ರಿ ಯಕೋಬನು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ‘ಯಬ್ಬೋಕ್’ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:22
10 ತಿಳಿವುಗಳ ಹೋಲಿಕೆ  

ಗಿಲ್ಯಾದ್ ಮೊದಲುಗೊಂಡು (ದಕ್ಷಿಣ ಕಡೆಯಲ್ಲಿ) ಅರ್ನೋನ್ ತಗ್ಗಿನವರೆಗೂ (ಪೂರ್ವ ಕಡೆಯಲ್ಲಿ) ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆ. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ದಕ್ಷಿಣ ಎಲ್ಲೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಪೂರ್ವದಿಕ್ಕಿನ ಎಲ್ಲೆ.


ಅಮ್ಮೋನಿಯರ ನಾಡನ್ನು ಮಾತ್ರ, ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶ ಮತ್ತು ಮಲೆನಾಡಿನ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ್ದರು.


ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.


ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಇವನ ರಾಜ್ಯ, ಅರ್ನೋನ್ ಕಣಿವೆಯ ಅಂಚಿನಲ್ಲಿ ಇರುವ ಅರೋಯೇರ್ ನಗರವನ್ನು ಮತ್ತು ಆ ಕಣಿವೆಯಲ್ಲೇ ಇರುವ ನಗರವನ್ನು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ನದಿಯ ತನಕವಿರುವ ಗಿಲ್ಯಾದಿನ ಅರ್ಧಪ್ರಾಂತ್ಯ,


ಆದರೆ ರಾಖೇಲಳು ಸತ್ತುಹೋದಳು. ಪ್ರಾಣಹೋಗುತ್ತಿದ್ದಾಗ ಆಕೆ ಆ ಮಗುವಿಗೆ ‘ಬೆನೋನಿ’ ಎಂದು ಹೆಸರಿಟ್ಟಳು. ಅದರ ತಂದೆಯಾದರೋ ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು.


ತರುವಾಯ ಯಕೋಬನು ಲಾಬಾನನಿಗೆ, “ನನ್ನ ಸೇವಾವಧಿ ಮುಗಿಯಿತು. ಆಕೆ ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡಿ,” ಎಂದು ಕೇಳಿದನು.


ಆದಕಾರಣ ಅವನು ಆ ಕಾಣಿಕೆಯನ್ನು ಮುಂಚಿತವಾಗಿ ಕಳಿಸಿ, ತಾನು ಆ ರಾತ್ರಿ ಆ ತನ್ನ ಪಾಳೆಯದೊಳಗೇ ಇದ್ದನು.


ಅವರನ್ನೂ ತನ್ನ ಆಸ್ತಿಪಾಸ್ತಿಯನ್ನೂ ದಾಟಿಸಿದ ಮೇಲೆ


ಆ ಅರಸನು ದೂತರಿಗೆ, “ಇಸ್ರಯೇಲರು ಈಜಿಪ್ಟಿನಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಜೋರ್ಡನ್ ನದಿಗಳವರೆಗೂ ಇದ್ದು ನನ್ನ ದೇಶವನ್ನು ಕಸಿದುಕೊಂಡರಲ್ಲವೆ? ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು,” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು