Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:24 - ಕನ್ನಡ ಸತ್ಯವೇದವು C.L. Bible (BSI)

24 ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಎಲ್ಲರನ್ನೂ ಹೊಳೆ ದಾಟಿಸಿದ ಮೇಲೆ ಕೊನೆಯವನಾಗಿ ತಾನೊಬ್ಬನೇ ಹೊಳೆದಾಟಲು ನಿಂತಿದ್ದಾಗ ಒಬ್ಬ ಪುರುಷನು ಬಂದು ಸೂರ್ಯೋದಯದವರೆಗೂ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:24
23 ತಿಳಿವುಗಳ ಹೋಲಿಕೆ  

ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಆಗ ರಾಖೇಲಳು, “ನನ್ನ ಅಕ್ಕನ ಸಂಗಡ ಬಹಳವಾಗಿ ಹೋರಾಡಿ ಗೆದ್ದಿದ್ದೇನೆ,” ಎಂದು ಹೇಳಿ ಆ ಮಗುವನ್ನು ‘ನಫ್ತಾಲಿ’ ಎಂದು ಹೆಸರಿಸಿದಳು.


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಹೊರಟು ಬಾ, ನನ್ನ ಕಾಂತ ಜಿಂಕೆಯಂತಿರು ಪ್ರಾಯದ ಹುಲ್ಲೆಯಂತಿರು ಬೇತೆರ್ ಪರ್ವತದ ಮೇಲಿರು.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಅಂತೆಯೇ ಮೋಶೆ ಸಮುದ್ರದ ಮೇಲೆ ಕೈ ಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಸರ್ವೇಶ್ವರ ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.


ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ,


ಅವರನ್ನೂ ತನ್ನ ಆಸ್ತಿಪಾಸ್ತಿಯನ್ನೂ ದಾಟಿಸಿದ ಮೇಲೆ


ಆ ಪುರುಷ ತಾನು ಗೆಲ್ಲದೆ ಇರುವುದನ್ನು ಕಂಡು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಹೋರಾಡುತ್ತಿರುವಾಗಲೆ ಯಕೋಬನ ತೊಡೆಯ ಕೀಲು ತಪ್ಪಿತು.


ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.


ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು