Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:30 - ಕನ್ನಡ ಸತ್ಯವೇದವು C.L. Bible (BSI)

30 ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:30
28 ತಿಳಿವುಗಳ ಹೋಲಿಕೆ  

ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


‘ಇಗೋ, ನಮ್ಮ ದೇವರಾದ ಸರ್ವೇಶ್ವರ ತಮ್ಮ ಪ್ರತಿಭೆಯನ್ನೂ ಮಹಿಮೆಯನ್ನೂ ನಮಗೆ ತೋರಿಸಿದ್ದಾರೆ; ಅಗ್ನಿಜ್ವಾಲೆಯೊಳಗಿಂದ ತಮ್ಮ ಸ್ವರವನ್ನು ನಮಗೆ ಕೇಳಿಸಿದ್ದಾರೆ; ದೇವರು ಮನುಷ್ಯನೊಡನೆ ಮಾತಾಡಿದ್ದನ್ನೂ, ಆದರೂ ಆ ಮನುಷ್ಯ ಸಾಯದೆ ಬದುಕಿರುವುದನ್ನೂ ಇಂದು ನಾವು ಕಂಡೆವು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.


ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಮತ್ತು ಪೆನೂವೇಲಿನ ಗೋಪುರವನ್ನು ಕೆಡವಿ ಬಿಟ್ಟು ಆ ಊರಿನ ಜನರನ್ನು ಕೊಂದುಹಾಕಿದನು.


ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನ ಜನರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ತಾತ್ಸಾತ ಮಾಡಿದರು.


ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು.


‘ಲೂಜ್’ ಎಂದು ಹೆಸರು ಪಡೆದಿದ್ದ ಆ ಊರಿಗೆ ‘ಬೇತೇಲ್’ ಎಂದು ನಾಮಕರಣ ಮಾಡಿದನು.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.


ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದಾಗ ದೇವರು ಮತ್ತೆ ಅವನಿಗೆ ದರ್ಶನಕೊಟ್ಟು ಅವನನ್ನು ಆಶೀರ್ವದಿಸಿದರು.


ಆದುದರಿಂದ ಅವನು ಆ ದೂತನನ್ನು, “ನೀವು ಹೇಳಿದ್ದು ನೆರವೇರಿದಾಗ ನಿಮ್ಮನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿಮ್ಮ ಹೆಸರೇನು?” ಎಂದು ಕೇಳಿದನು.


ಸರ್ವೇಶ್ವರನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಎಂದನು.


ಅಗ್ನಿಕುಂಡಕ್ಕೆ ಆಹುತಿಯಾಗುವುವು ಯುದ್ಧಕ್ಕೆ ಬಂದ ಯೋಧರ ಪಾದರಕ್ಷೆಗಳು ರಕ್ತಸಿಕ್ತವಾದವರ ದೇಹದ ಕವಚಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು