Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:31 - ಕನ್ನಡ ಸತ್ಯವೇದವು C.L. Bible (BSI)

31 ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯ ಆಯಿತು; ಕೀಲು ಕಳಚಿದ ತೊಡೆಯ ನಿಮಿತ್ತ ಅವನು ಕುಂಟುಕೊಂಡೇ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಅವನು ತೊಡೆಯ ನಿವಿುತ್ತ ಕುಂಟಿಕೊಂಡು ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಮೇಲೆ ಅವನು ಪೆನೀಯೇಲ್‌ನಿಂದ ಹೊರಟುಹೋಗುತ್ತಿರುವಾಗ ಸೂರ್ಯೋದಯವಾಯಿತು. ಯಾಕೋಬನು ತನ್ನ ಕೀಲುನೋವಿನಿಂದ ಕುಂಟುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯಾಕೋಬನು ಪೆನೀಯೇಲನ್ನು ದಾಟಿಹೋದಾಗ, ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:31
19 ತಿಳಿವುಗಳ ಹೋಲಿಕೆ  

ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಇಗೋ, ನಾನೆಡವಿ ಬೀಳಲಿರುವೆ I ಆಪತ್ತಿಗಾಗಿ ಸಂಕಟಪಡುತ್ತಿರುವೆ II


ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನ ಜನರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ತಾತ್ಸಾತ ಮಾಡಿದರು.


ಆ ಪುರುಷ ತಾನು ಗೆಲ್ಲದೆ ಇರುವುದನ್ನು ಕಂಡು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಹೋರಾಡುತ್ತಿರುವಾಗಲೆ ಯಕೋಬನ ತೊಡೆಯ ಕೀಲು ತಪ್ಪಿತು.


ಲೋಟನು ಚೋಗರನ್ನು ಮುಟ್ಟುವಷ್ಟರಲ್ಲಿ ಸೂರ್ಯೋದಯವಾಗಿತ್ತು.


ಹೊತ್ತು ಮೂಡುವುದಕ್ಕೆ ಮುಂಚೆ ದೂತರು ಲೋಟನಿಗೆ, “ಏಳು, ನಿನ್ನ ಹೆಂಡತಿ ಮತ್ತು ಹೆಣ್ಣುಮಕ್ಕಳಿಬ್ಬರನ್ನು ಕರೆದುಕೊಂಡು ಬೇಗನೆ ಹೊರಡು; ಇಲ್ಲದಿದ್ದರೆ ಊರಿಗೆ ಬರಲಿರುವ ದಂಡನೆಯಲ್ಲಿ ನೀನೂ ಸಿಕ್ಕಿಕೊಂಡು ನಾಶವಾಗಬೇಕಾದೀತು,” ಎಂದು ಹೇಳಿ ತ್ವರೆಪಡಿಸಿದರು.


ಆ ಪುರುಷನು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರೆಯೇಲರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಮಾಂಸವನ್ನು ತಿನ್ನುವುದಿಲ್ಲ.


ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ.


ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ಅವರು ಇಸ್ರಯೇಲರ ಮುಖಂಡರಿಗೆ ಯಾವ ಹಾನಿಯನ್ನೂ ಮಾಡಲಿಲ್ಲ. ಆ ಮುಖಂಡರು ದೇವರನ್ನು ಸಂದರ್ಶಿಸಿದರು; ಬಳಿಕ ಅನ್ನಪಾನಗಳನ್ನು ತೆಗೆದುಕೊಂಡರು.


‘ಇಗೋ, ನಮ್ಮ ದೇವರಾದ ಸರ್ವೇಶ್ವರ ತಮ್ಮ ಪ್ರತಿಭೆಯನ್ನೂ ಮಹಿಮೆಯನ್ನೂ ನಮಗೆ ತೋರಿಸಿದ್ದಾರೆ; ಅಗ್ನಿಜ್ವಾಲೆಯೊಳಗಿಂದ ತಮ್ಮ ಸ್ವರವನ್ನು ನಮಗೆ ಕೇಳಿಸಿದ್ದಾರೆ; ದೇವರು ಮನುಷ್ಯನೊಡನೆ ಮಾತಾಡಿದ್ದನ್ನೂ, ಆದರೂ ಆ ಮನುಷ್ಯ ಸಾಯದೆ ಬದುಕಿರುವುದನ್ನೂ ಇಂದು ನಾವು ಕಂಡೆವು.


ಅಗ್ನಿಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪರಾದ ದೇವರ ಸ್ವರವನ್ನು ನಮ್ಮಂತೆ ಕೇಳಿಯೂ ಬದುಕಿರುವ ಮಾನವ ಯಾರಿದ್ದಾನೆ?


ಆತನು ಸರ್ವೇಶ್ವರನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಸ್ವಾಮಿ, ಸರ್ವೇಶ್ವರಾ, ಸರ್ವೇಶ್ವರನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.


ಆದರೆ ಸರ್ವೇಶ್ವರನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ,” ಎಂದನು.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು