Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:4 - ಕನ್ನಡ ಸತ್ಯವೇದವು C.L. Bible (BSI)

4 ಕಳುಹಿಸುವಾಗ ಅವರಿಗೆ, “ನೀವು ನನ್ನೊಡೆಯ ಏಸಾವನ ಬಳಿಗೆ ಹೋಗಿ ಈ ಸಮಾಚಾರವನ್ನು ಕೊಡಿ: ‘ನಿಮ್ಮ ದಾಸ ಯಕೋಬನಾದ ನಾನು ಇಷ್ಟು ದಿನ ಲಾಬಾನನ ಬಳಿ ವಾಸಮಾಡಬೇಕಾಗಿ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕಳುಹಿಸುವಾಗ ಅವರಿಗೆ - ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ - ನಿನ್ನ ಸೇವಕನಾದ ಯಾಕೋಬನು ಇಷ್ಟು ದಿವಸ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಸಾವನಿಗೆ ಈ ಸಂಗತಿಗಳನ್ನು ತಿಳಿಸಿದನು: “ನಿನ್ನ ಸೇವಕನಾದ ಯಾಕೋಬನು ಹೇಳುವುದೇನೆಂದರೆ, ‘ನಾನು ಕಳೆದ ವರ್ಷಗಳೆಲ್ಲಾ ಲಾಬಾನನೊಡನೆ ಜೀವಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕಳುಹಿಸುವಾಗ ಅವರಿಗೆ, “ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳಬೇಕು: ‘ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ: ಲಾಬಾನನ ಸಂಗಡ ನಾನು ಇಲ್ಲಿಯವರೆಗೆ ಪ್ರವಾಸಿಯಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:4
23 ತಿಳಿವುಗಳ ಹೋಲಿಕೆ  

ಉದಾಹರಣೆಗೆ: ಸಾರಳು ತನ್ನ ಪತಿ ಅಬ್ರಹಾಮನಿಗೆ ವಿಧೇಯಳಾಗಿದ್ದು ಆತನನ್ನು, “ಯಜಮಾನ” ಎಂದು ಕರೆಯುತ್ತಿದ್ದಳು. ಯಾವ ಭಯಭೀತಿಯಿಲ್ಲದೆ ಸತ್ಕಾರ್ಯಗಳನ್ನು ಮಾಡುವವರಾಗಿದ್ದರೆ, ನೀವೂ ಸಾರಳ ಕುಮಾರ್ತಿಯರೇ ಹೌದು.


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ಮಗನೇ, ನೀನು ನೆರೆಯವನ ಕೈವಶವಾಗಿರುವೆ; ಈ ಪರಿಮಾಡು ತಪ್ಪಿಸಿಕೊಳ್ಳಬೇಕಾದರೆ:


ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಇಸ್ರಯೇಲರ ಅರಸನ ಬಳಿಗೆ ಬಂದು, “ಜೀವದಾನ ಮಾಡಬೇಕೆಂದು ನಿಮ್ಮ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ,” ಎಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು,” ಎಂದು ಉತ್ತರಕೊಟ್ಟನು.


ಸೌಲನು ದಾವೀದನ ಸ್ವರದ ಗುರುತು ಹಿಡಿದನು. “ದಾವೀದನೇ, ನನ್ನ ಪುತ್ರನೇ, ಇದು ನಿನ್ನ ಸ್ವರವೇ?” ಎಂದು ಕೇಳಿದನು. ಅವನು, “ಅರಸನೇ, ನನ್ನ ಒಡೆಯನೇ, ಹೌದು, ನನ್ನ ಸ್ವರವೇ;


ಒಡೆಯಾ, ಕೋಪಗೊಳ್ಳಬೇಡಿ. ಈ ಜನರು ಎಂಥ ಹಟಮಾರಿಗಳೆಂದು ನೀವೇ ಬಲ್ಲಿರಿ.


ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪರಿವಾರ ಏತಕ್ಕೆ?” ಎಂದು ಕೇಳಿದನು. ಯಕೋಬನು, “ಒಡೆಯನ ದಯೆ ನನಗೆ ದೊರಕಲೆಂದು ನಾನು ತಮಗೆ ಅದನ್ನು ಕಳಿಸಿಕೊಟ್ಟೆ,” ಎಂದನು.


‘ಇವು ನಿಮ್ಮ ದಾಸ ಯಕೋಬನವು; ಒಡೆಯರಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳಿಸಿಕೊಟ್ಟಿದ್ದಾರೆ; ಅವರೂ ನಮ್ಮ ಹಿಂದೆ ಬರುತ್ತಿದ್ದಾರೆ’ ಎಂದು ಉತ್ತರಕೊಡಬೇಕು,” ಎಂಬುದಾಗಿ ಅಪ್ಪಣೆ ಕೊಟ್ಟನು.


ನನಗೆ ಎತ್ತು - ಕತ್ತೆ, ಆಡು - ಕುರಿ, ದಾಸ - ದಾಸಿಯರು ಇದ್ದಾರೆ. ನನ್ನೊಡೆಯರಾದ ನೀವು ನನ್ನ ಬಗ್ಗೆ ದಯದಾಕ್ಷಿಣ್ಯವುಳ್ಳವರಾಗಿರಬೇಕೆಂಬ ಕೋರಿಕೆಯಿಂದ ನಮ್ಮನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ' ಎಂದು ತಿಳಿಸಿರಿ” ಎಂದನು.


ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.


ಇಂಥ ಪರಿಸ್ಥಿತಿಯಲ್ಲೂ ಇಪ್ಪತ್ತು ವರ್ಷ ನಿಮ್ಮ ಮನೆಯಲ್ಲಿದ್ದು ನಿಮ್ಮಿಬ್ಬರ ಹೆಣ್ಣು ಮಕ್ಕಳಿಗಾಗಿ ಹದಿನಾಲ್ಕು ವರ್ಷ ಹಾಗೂ ನಿಮ್ಮ ಆಡುಕುರಿಗಳಿಗಾಗಿ ಆರು ವರ್ಷ ದುಡಿದಿದ್ದೇನೆ. ಹೀಗಿದ್ದರೂ ಹತ್ತು ಸಾರಿ ನೀವು ನನ್ನ ಸಂಬಳವನ್ನು ಬದಲಾಯಿಸಿದಿರಿ.


ಸಹನಶೀಲತೆಯಿಂದ ಅರಸನನ್ನೂ ಒಲಿಸಿಕೊಳ್ಳಬಹುದು; ಮೃದುವಾದ ನಾಲಿಗೆ ಎಲುಬನ್ನೂ ಮುರಿಯಬಲ್ಲದು.


‘ನಾನು ಬಹಳವಾಗಿ ದಣಿದು ಬಂದಿದ್ದೇನೆ. ಆ ಕೆಂಪು ಪದಾರ್ಥವನ್ನು ತಿನ್ನಲು ಕೊಡು’, ಎಂದು ಕೇಳಿದ. (ಈ ಕಾರಣದಿಂದಲೇ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)


ತಾವು ದಯವಿಟ್ಟು ದಾಸನಿಗಿಂತಲು ಮುಂಚೆ ಹೊರಡಬಹುದು, ನಾನು ನನ್ನ ಮುಂದಿರುವ ಆಡುಕುರಿಗಳ ಹಾಗೂ ಮಕ್ಕಳ ನಡಿಗೆಗೆ ತಕ್ಕ ಹಾಗೆ ಮೆಲ್ಲಮೆಲ್ಲನೆ ನಡೆದು ನನ್ನೊಡೆಯರ ನಾಡಾದ ಎದೋಮಿಗೆ ಬರುತ್ತೇನೆ,” ಎಂದನು


ಈ ಕಾರಣ ಏದೋಮನೆಂಬ ಏಸಾವನು ಸೇಯೀರ್ ಮಲೆನಾಡಿಗೆ ಹೋಗಿ ಅಲ್ಲೇ ವಾಸವಾಗಿದ್ದನು.


ಸೇಯೀರ್ ಮಲೆನಾಡಿನಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶಾವಳಿ ಹೀಗಿದೆ:


ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.


‘ದೂಮ’ ಕುರಿತ ದೈವೋಕ್ತಿ : “ಪಹರೆಯವನೇ, ರಾತ್ರಿ ಕಳೆಯುವುದು ಯಾವಾಗ? ಪಹರೆಯವನೇ, ಕತ್ತಲು ಕಳೆಯುವುದು ಯಾವಾಗ?” ಎಂಬ ಕೂಗು ಸೇಯಾರಿನಿಂದ ನನಗೆ ಕೇಳಿಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು