Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನೂ ಕುರಿ ದನ ಒಂಟೆಗಳನ್ನೂ ಎರಡು ಪಾಳೆಯ ಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:7
22 ತಿಳಿವುಗಳ ಹೋಲಿಕೆ  

ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ.


ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.


ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.


ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II


ಎದೆಗುಂದಿ ಮೊರೆಯಿಡುತ್ತಿರುವೆ ಜಗದೆಲ್ಲೆಯಿಂದ I ಹತ್ತಲಾಗದ ಆಶ್ರಯಗಿರಿಗೆ ಹತ್ತಿಸೆನ್ನ II


ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II


ಫರೋಹನು ಸಮೀಪಿಸುತ್ತಿರುವುದನ್ನು ಇಸ್ರಯೇಲರು ಕಣ್ಣೆತ್ತಿ ನೋಡಿದರು. ತಮ್ಮನ್ನು ಬೆನ್ನಟ್ಟಿ ಬಂದಿದ್ದ ಈಜಿಪ್ಟಿನವರನ್ನು ಕಂಡು ಬಹಳವಾಗಿ ಭಯಪಟ್ಟು ಸರ್ವೇಶ್ವರನಿಗೆ ಮೊರೆಯಿಟ್ಟರು.


ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II


ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.


ಏಸಾವನು ಒಂದು ಪರಿವಾರದ ಮೇಲೆ ಬಿದ್ದರೆ ಇನ್ನೊಂದು ತಪ್ಪಿಸಿಕೊಳ್ಳಬಹುದೆಂಬುದು ಅವನ ಯೋಚನೆಯಾಗಿತ್ತು.


ಯಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಮಂದಿ ಜನರ ಸಮೇತ ಬರುತ್ತಿದ್ದನು. ಕೂಡಲೆ ಅವನು ಲೇಯಳಿಗೂ ರಾಖೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು