Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:15 - ಕನ್ನಡ ಸತ್ಯವೇದವು C.L. Bible (BSI)

15 ಏಸಾವನು, “ಹಾಗಾದರೆ, ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟುಹೋಗುತ್ತೇನೆ,” ಎಂದನು. ಯಕೋಬನು, “ಏತಕ್ಕೆ, ಬೇಡಿ, ನನ್ನೊಡೆಯರ ದಯೆ ನನ್ನ ಮೇಲಿದ್ದರೆ ಸಾಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಏಸಾವನು - ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು - ಅದೇಕೆ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು. ಆದರೆ ಯಾಕೋಬನು, “ಅದು ನಿನ್ನ ದಯೆ. ಆದರೆ ಅಂಥ ಅಗತ್ಯವೇನೂ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:15
8 ತಿಳಿವುಗಳ ಹೋಲಿಕೆ  

ಆಗ ರೂತಳು, “ಒಡೆಯಾ, ತಾವು ನನಗೆ ದೊಡ್ಡ ಉಪಕಾರವನ್ನು ಮಾಡಿದ್ದೀರಿ. ನಾನು ತಮ್ಮ ದಾಸಿ ಎನಿಸಿಕೊಳ್ಳುವುದಕ್ಕೂ ಯೋಗ್ಯಳಲ್ಲ. ಆದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿದ್ದೀರಿ,” ಎಂದು ಹೇಳಿದಳು.


ಅದಕ್ಕೆ ಅವರು, ನಮ್ಮ ಪ್ರಾಣಗಳನ್ನು ಉಳಿಸಿದ್ದೀರಿ. ನಮ್ಮ ದಣಿಗಳಾದ ನಿಮ್ಮ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಊಳಿಗದವರಾಗಿರುತ್ತೇವೆ,” ಎಂದರು.


ಬಳಿಕ ಶೆಕೆಮನು ಆ ಹುಡುಗಿಯ ತಂದೆ ಮತ್ತು ಸಹೋದರರಿಗೆ , “ನನ್ನ ಮೇಲೆ ನಿಮಗೆ ಕೃಪೆಯಿರಲಿ; ನೀವು ಹೇಳುವಷ್ಟನ್ನು ಕೊಡುತ್ತೇನೆ.


ಆಗ ಅರಸನು, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ,” ಎಂದು ಹೇಳಿದನು. ಅವನು, “ಅರಸರೇ, ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ; ನನ್ನ ಒಡೆಯರೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ!” ಎಂದನು.


ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.


ಏಸಾವನು ಆ ದಿನವೇ ಎದೋಮ್ ನಾಡಿಗೆ ಹೊರಟುಹೋದನು.


“ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆಯಿರಲಿ,” ಎಂದು ಹೇಳಿ ಆಕೆ ಅಲ್ಲಿಂದ ಹೊರಟುಹೋಗಿ ಊಟಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು.


ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು