ಆದಿಕಾಂಡ 33:18 - ಕನ್ನಡ ಸತ್ಯವೇದವು C.L. Bible (BSI)18 ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದು ಕಾನಾನ್ ನಾಡಿನ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಪಟ್ಟಣದ ಮುಂದೆಯೇ ತನ್ನ ಗುಡಾರಗಳನ್ನು ಹಾಕಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯಾಕೋಬನು ಪದ್ದನ್ಅರಾವಿುನಿಂದ ಬಂದ ಮೇಲೆ ಕಾನಾನ್‍ದೇಶದ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಊರಿನ ಮುಂದೆ ತನ್ನ ಗುಡಾರಗಳನ್ನು ಹಾಕಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಮೇಲೆ ಯಾಕೋಬನು ಕಾನಾನ್ ದೇಶದ ಶೆಕೆಮ್ ಪಟ್ಟಣಕ್ಕೆ ಬಂದು ತನ್ನ ಪಾಳೆಯನ್ನು ಪಟ್ಟಣದ ಸಮೀಪದಲ್ಲಿದ್ದ ಒಂದು ಹೊಲದಲ್ಲಿ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು. ಅಧ್ಯಾಯವನ್ನು ನೋಡಿ |