Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:20 - ಕನ್ನಡ ಸತ್ಯವೇದವು C.L. Bible (BSI)

20 ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಲ್ಲಿ ಯಾಕೋಬನು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:20
10 ತಿಳಿವುಗಳ ಹೋಲಿಕೆ  

ಯಕೋಬನು ತನ್ನ ಅಣ್ಣನ ಬಳಿಯಿಂದ ಓಡಿಹೋಗುವಾಗ ದೇವರು ಅವನಿಗೆ ಪ್ರತ್ಯಕ್ಷವಾದುದು ಅಲ್ಲಿಯೇ. ಎಂದೇ ಅವನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿ, ಆ ಸ್ಥಳಕ್ಕೆ ‘ಏಲ್ ಬೇತೇಲ್’ ಎಂದು ಹೆಸರಿಟ್ಟನು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ನಮ್ಮ ಪೂರ್ವಜರು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸುತ್ತಿದ್ದರು. ಆದರೆ ಆರಾಧಿಸತಕ್ಕ ಕ್ಷೇತ್ರ ಇರುವುದು ಜೆರುಸಲೇಮಿನಲ್ಲೇ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.


ಗುಡಾರ ಹಾಕಿಸಿದ ಭೂಮಿಯನ್ನು, ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಗೆ ನೂರು ವರಹಗಳನ್ನು ಕೊಟ್ಟು ಅವರಿಂದ ಕೊಂಡುಕೊಂಡನು.


ಯಕೋಬನಿಗೆ ಲೇಯಳಲ್ಲಿ ಹುಟ್ಟಿದ ದೀನಳು ಒಂದು ದಿನ ಆ ನಾಡಿನ ಮಹಿಳೆಯರನ್ನು ನೋಡಲು ಹೊರಗೆ ಹೋಗಿ ಇದ್ದಳು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು